Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:7 - ಕನ್ನಡ ಸತ್ಯವೇದವು C.L. Bible (BSI)

7 ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸ ಆಸನ ಬಳಿಗೆ ಬಂದು, “ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಳ್ಳದೆ ಸಿರಿಯಾದ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಸಿರಿಯಾ ರಾಜನ ಸೈನ್ಯವು ನಿಮ್ಮ ಕೈಗೆ ಬೀಳದಂತೆ ನುಣಿಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಕಾಲದಲ್ಲಿ ದರ್ಶಕನಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವನನ್ನು ಆಶ್ರಯಿಸಿಕೊಳ್ಳದೆ ಅರಾಮ್ಯರ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಅರಾಮ್ ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ - ನೀನು ನಿನ್ನ ದೇವರಾದ ಯೆಹೋವನ ಮೇಲೆ ಆತುಕೊಳ್ಳದೆ ಅರಾಮ್ಯರ ಅರಸನ ಮೇಲೆ ಆತುಕೊಂಡದರಿಂದ ಅರಾಮ್‍ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ದೇವದರ್ಶಿಯಾದ ಹನಾನಿಯು ಯೆಹೂದದ ರಾಜನಾದ ಆಸನ ಬಳಿಗೆ ಬಂದು, “ಆಸನೇ, ನೀನು ದೇವರಾದ ಯೆಹೋವನ ಮೇಲೆ ಭರವಸವನ್ನಿಡುವ ಬದಲು ಅರಾಮ್ಯರ ಅರಸನ ಮೇಲೆ ಭರವಸವನ್ನಿಟ್ಟಿದ್ದರಿಂದ ಅರಾಮ್ಯರ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದೇ ಕಾಲದಲ್ಲಿ ದರ್ಶಿಯಾದ ಹನಾನೀಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವ ದೇವರ ಮೇಲೆ ಆತುಕೊಳ್ಳದೆ, ಅರಾಮಿನ ಅರಸನ ಮೇಲೆ ಆತುಕೊಂಡದ್ದರಿಂದ, ಅರಾಮಿನ ಅರಸನ ಸೈನ್ಯವು ನಿಮ್ಮ ಕೈಯಿಂದ ತಪ್ಪಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:7
19 ತಿಳಿವುಗಳ ಹೋಲಿಕೆ  

ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಆಗ ಸರ್ವೇಶ್ವರಸ್ವಾಮಿ ಹನಾನೀಯನ ಮಗ ಯೇಹುವಿನ ಮುಖಾಂತರ ಬಾಷನಿಗೆ ಹೀಗೆ ಹೇಳಿಸಿದರು:


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆ ಇಸ್ರಯೇಲ್ ರಾಜರ ಗ್ರಂಥದಲ್ಲಿ ಹನಾನೀಯನ ಮಗ ಯೇಹುವಿನ ವೃತ್ತಾಂತದಲ್ಲಿ ದಾಖಲಾಗಿದೆ.


ಹೀಗೆ ಇಸ್ರಯೇಲರು ಆ ಕಾಲದಲ್ಲಿ ಸೋಲು ಸವಿದರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಲ್ಲಿ ಭರವಸೆಯಿಟ್ಟದ್ದರಿಂದ ಜಯಶೀಲರಾದರು.


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಇವನು ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯಲ್ಲೆ ಭರವಸೆಯಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಅಲ್ಲದೆ ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದವಿದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಯೇಲರ ಅರಸ ಬಾಷನು ನನ್ನ ನಾಡಿನಿಂದ ಸೈನ್ಯವನ್ನು ಹಿಂದಕ್ಕೆ ತೆಗೆದುಕೊಂಡು ನನ್ನನ್ನು ಬಿಟ್ಟುಹೋಗುವಂತೆ, ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಸಿದನು.


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಅನಂತರ ಅರಸ ಆಸನು ಎಲ್ಲಾ ಯೆಹೂದ್ಯರನ್ನು ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.


ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟುಬಿಟ್ಟದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು.


ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ದೂತರು ಎಲ್ಲಿಯವರು? ಏನು ಕೇಳಿದರು?” ಎಂದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ನಾಡಾದ ಬಾಬಿಲೋನಿಯದಿಂದ ಬಂದವರು,” ಎಂದು ಉತ್ತರಕೊಟ್ಟನು.


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.


ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು