Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:8 - ಕನ್ನಡ ಸತ್ಯವೇದವು C.L. Bible (BSI)

8 ಸುದಾನ್ ಹಾಗೂ ಲಿಬಿಯರ ಸೈನ್ಯ ಅಪರಿಮಿತ ರಥಾಶ್ವಬಲಗಳುಳ್ಳ ಮಹಾ ಸೈನ್ಯವಲ್ಲವೇ? ನೀವು ಸರ್ವೇಶ್ವರನನ್ನು ಆಶ್ರಯಿಸಿಕೊಂಡದ್ದರಿಂದ ಅವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕೂಷ್ಯ ಹಾಗೂ ಲೂಬ್ಯರ ಸೈನ್ಯವು ಅಪರಿಮಿತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೇ? ನೀನು ಯೆಹೋವನನ್ನು ಆಶ್ರಯಿಸಿಕೊಂಡದ್ದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕೂಷ್ಯಲೂಬ್ಯರ ಸೈನ್ಯವು ಅಪರಿವಿುತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೋ! ನೀನು ಯೆಹೋವನ ಮೇಲೆ ಆತುಕೊಂಡದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಥಿಯೋಪಿಯಾದವರಿಗೆ ಮತ್ತು ಲಿಬ್ಯದವರಿಗೆ ಮಹಾದೊಡ್ಡ ಸೈನ್ಯವಿತ್ತು. ಅಪರಿಮಿತವಾದ ರಥಾಶ್ವಗಳಿದ್ದವು. ಆದರೆ ಅವರನ್ನು ಸೋಲಿಸುವಂತೆ ಯೆಹೋವನು ನಿನಗೆ ಸಹಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕೂಷನವರೂ, ಲಿಬಿಯದವರೂ ಮಹಾ ಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ, ರಾಹುತರೂ ಇದ್ದರಲ್ಲವೇ? ಆಗ ನೀನು ಯೆಹೋವ ದೇವರನ್ನು ಆತುಕೊಂಡದ್ದರಿಂದ ದೇವರು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:8
11 ತಿಳಿವುಗಳ ಹೋಲಿಕೆ  

ಈಜಿಪ್ಟಿನ ಅರಸ ಶೀಶಕನು, ಸಾವಿರದ ಇನ್ನೂರು ರಥಗಳನ್ನೂ ಅರವತ್ತು ಸಾವಿರ ಮಂದಿ ರಾಹುತರನ್ನೂ ಈಜಿಪ್ಟಿನ, ಲಿಬ್ಯದ, ಸುಕ್ಕೀಯದ ಹಾಗೂ ಕೂಷ್ಯದ ಅಸಂಖ್ಯ ಸೈನಿಕರನ್ನೂ ಕೂಡಿಸಿಕೊಂಡು ಜೆರುಸಲೇಮಿಗೆ ಹೊರಟುಬಂದನು.


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸ ಆಸನ ಬಳಿಗೆ ಬಂದು, “ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಳ್ಳದೆ ಸಿರಿಯಾದ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಸಿರಿಯಾ ರಾಜನ ಸೈನ್ಯವು ನಿಮ್ಮ ಕೈಗೆ ಬೀಳದಂತೆ ನುಣಿಚಿಕೊಂಡಿತು.


ಹೀಗಾಗಿ ಇಸ್ರಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದರು.


ಹೀಗೆ ಇಸ್ರಯೇಲರು ಆ ಕಾಲದಲ್ಲಿ ಸೋಲು ಸವಿದರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಲ್ಲಿ ಭರವಸೆಯಿಟ್ಟದ್ದರಿಂದ ಜಯಶೀಲರಾದರು.


ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟುಬಿಟ್ಟದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು.


ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.


ಸುಡಾನ್ ಮತ್ತು ಈಜಿಪ್ಟ್ ಅದಕ್ಕೆ ಬೆಂಬಲವಾಗಿದ್ದವು. ಪೂಟ್ ಮತ್ತು ಲಿಬ್ನ ಅದಕ್ಕೆ ಮಿತ್ರನಾಡುಗಳಾಗಿದ್ದವು


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದ ಮೂರು ಲಕ್ಷ ಮಂದಿ ಯೆಹೂದ್ಯರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರು ರಣವೀರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು