Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:9 - ಕನ್ನಡ ಸತ್ಯವೇದವು C.L. Bible (BSI)

9 ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಠಿಯನ್ನು ಹರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿರುವೆ; ಇನ್ನು ಮುಂದೆ ನಿನಗೆ ಯುದ್ಧಗಳು ಇದ್ದೇ ಇರುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:9
38 ತಿಳಿವುಗಳ ಹೋಲಿಕೆ  

ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.


ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.


ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ಈ ಸ್ಥಳವನ್ನು ಕುರಿತು, ‘ನನ್ನ ನಾಮದ ಮಹಿಮೆ ಇಲ್ಲಿ ನೆಲೆಸುವುದು’ ಎಂದು ಹೇಳಿದ್ದೀರಿ, ನಿಮ್ಮ ಕೃಪಾಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.


ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II


ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?


ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.


ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ದೇವರನ್ನು ಪ್ರಾರ್ಥಿಸಿದನು.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.


ಆಸನಿಗೂ ಇಸ್ರಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಮತಿಹೀನನೇ, ನೀನು ಬಿತ್ತಿದ ಬೀಜ ಸಾಯದಿದ್ದರೆ ಅದು ಜೀವ ತಾಳುವುದುಂಟೆ? ಇಲ್ಲ.


ಇಸ್ರಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.


ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ಆತ ನನ್ನ ನಡತೆಯನ್ನೂ ನೋಡುತ್ತಾನೆ; ನನ್ನ ಹೆಜ್ಜೆಗಳನ್ನೂ ಎಣಿಸುತ್ತಾನಲ್ಲವೆ?


ಅವರೆಲ್ಲರ ಹೃದಯಗಳನು ನಿರ್ಮಿಸಿದಾತನವನು I ಅವರವರ ಕೃತ್ಯಗಳನು ಪರೀಕ್ಷಿಸುತಿಹನು II


ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.


ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಬೀಳ್ಕೊಡಲೂ ಆಗದಂತೆ ಮಾಡಿದೆ. ನೀನು ಮಾಡಿದ್ದು ಎಂಥ ಹುಚ್ಚು ಕೆಲಸ.


ಅವನ ಆಳ್ವಿಕೆಯ ಮೂವತ್ತ ಐದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.


“ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥ ಮನಸ್ಸಿನಿಂದಲೂ ಕಾರ್ಯನಿರ್ವಹಿಸತಕ್ಕದ್ದು.


ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.


ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಬಲ್ಲವನು ದೇವರೇ ಆಕಾಶದ ಕೆಳಗಿನ ಸಮಸ್ತವನು ನೋಡಬಲ್ಲವನು ಆತನೊಬ್ಬನೇ!


ಸ್ಥಾವರ ಸಿಂಹಾಸನದಿಂದ ನೋಡುತಿಹನು I ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು II


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು