Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:1 - ಕನ್ನಡ ಸತ್ಯವೇದವು C.L. Bible (BSI)

1 ಆಸನಿಗೆ ಅನಂತರ ಅವನ ಮಗ ಯೇಹೋಷಾಫಾಟನು ಅರಸನಾದನು. ಇಸ್ರಯೇಲರಿಂದ ಅಪಾಯವಾಗದಂತೆ ಇವನು ತನ್ನನ್ನೇ ಭದ್ರಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಸನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. ಅವನು ಇಸ್ರಾಯೇಲರೆದುರು ಪ್ರಬಲನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅವನಿಗೆ ಬದಲಾಗಿ ಅವನ ಮಗನಾದ ಯೆಹೋಷಾಫಾಟನು ಅರಸನಾಗಿ ಇಸ್ರಾಯೇಲ್ಯರಿಂದ ಅಪಾಯವಾಗದಂತೆ ತನ್ನನ್ನು ಭದ್ರಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಸನ ಮಗ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು. ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:1
12 ತಿಳಿವುಗಳ ಹೋಲಿಕೆ  

ಅವನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಜ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು.


ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.


ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು.


ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.


ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”


ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕ ಬಲ ಉಳ್ಳವನಾಗಿ ಅವನ ಹೆಸರು ಈಜಿಪ್ಟಿನ ಗಡಿಗಳವರೆಗೂ ಹಬ್ಬಿತು.


ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;


ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು:


ಇಸ್ರಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.


ಆಗ ಸೌಲನ ಮಗ ಯೋನಾತಾನನು ಅಲ್ಲಿಗೆ ಹೋಗಿ,


ಜುದೇಯದ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಜುದೇಯ ನಾಡಿನಲ್ಲೂ ಹಾಗೂ ತನ್ನ ತಂದೆ ಆಸನು ಕಿತ್ತುಕೊಂಡಿದ್ದ ಎಫ್ರಯಿಮರ ಪಟ್ಟಣಗಳಲ್ಲೂ ಅಧಿಕಾರಿಗಳನ್ನು ನೇಮಿಸಿದನು.


ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು