Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:11 - ಕನ್ನಡ ಸತ್ಯವೇದವು C.L. Bible (BSI)

11 ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರೇಬಿಯರು ತಮ್ಮ ಪಶುಪ್ರಾಣಿಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳನ್ನೂ ಏಳು ಸಾವಿರದ ಏಳುನೂರು ಹೋತಗಳನ್ನೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಗಳಲ್ಲಿ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಗಳನ್ನೂ, ಕಪ್ಪದ ಹಣವನ್ನು ತಂದರು. ಅರಬಿಯ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:11
11 ತಿಳಿವುಗಳ ಹೋಲಿಕೆ  

ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕ ಬಲ ಉಳ್ಳವನಾಗಿ ಅವನ ಹೆಸರು ಈಜಿಪ್ಟಿನ ಗಡಿಗಳವರೆಗೂ ಹಬ್ಬಿತು.


ಪ್ರತಿವರ್ಷ ಸುಮಾರು 23,000 ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


ಆದುದರಿಂದ ಸರ್ವೇಶ್ವರ ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದರು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನಘನತೆಗಳು ಹೆಚ್ಚಾದವು.


ಅನೇಕ ಕುರಿಹಿಂಡುಗಳುಳ್ಳವನಾಗಿದ್ದ ಮೋವಾಬ್ಯರ ಅರಸ ಮೇಷನೆಂಬವನು ಇಸ್ರಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.


ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಜುದೇಯ ನಾಡಿನಲ್ಲಿ ಕೋಟೆಗಳನ್ನು ಮತ್ತು ಉಗ್ರಾಣದ ಪಟ್ಟಣಗಳನ್ನು ಕಟ್ಟಿಸಿದನು.


ಸರ್ವೇಶ್ವರ ಫಿಲಿಷ್ಟಿಯರನ್ನೂ ಸುಡಾನಿನ ನೆರೆಯವರಾದ ಅರೇಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದರು.


ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.


ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ಅವರೆಲ್ಲರು ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


“ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು