Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:2 - ಕನ್ನಡ ಸತ್ಯವೇದವು C.L. Bible (BSI)

2 ಜುದೇಯದ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಜುದೇಯ ನಾಡಿನಲ್ಲೂ ಹಾಗೂ ತನ್ನ ತಂದೆ ಆಸನು ಕಿತ್ತುಕೊಂಡಿದ್ದ ಎಫ್ರಯಿಮರ ಪಟ್ಟಣಗಳಲ್ಲೂ ಅಧಿಕಾರಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನು ಯೆಹೂದದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ರ ಪಟ್ಟಣಗಳಲ್ಲಿಯೂ ಅಧಿಕಾರಿಗಳನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇವನು ಯೆಹೂದದ ಕೋಟೆಕೊತ್ತಲಗಳುಳ್ಳ ಎಲ್ಲಾ ಪಟ್ಟಣಗಳಲ್ಲಿಯೂ ಸೈನ್ಯವನ್ನಿರಿಸಿ ಯೆಹೂದ ದೇಶದಲ್ಲಿಯೂ ತನ್ನ ತಂದೆಯಾದ ಆಸನು ಕಿತ್ತುಕೊಂಡಿದ್ದ ಎಫ್ರಾಯೀಮ್ಯರ ಪಟ್ಟಣದಲ್ಲಿಯೂ ಅಧಿಕಾರಿಗಳನ್ನು ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು, ಯೆಹೂದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದುಕೊಂಡ ಎಫ್ರಾಯೀಮನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:2
6 ತಿಳಿವುಗಳ ಹೋಲಿಕೆ  

ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು.


ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸವಾಗಿದ್ದು ಜುದೇಯದ ಈ ಕೆಳಕಂಡ ಪಟ್ಟಣಗಳನ್ನು ಭದ್ರಪಡಿಸಿದನು:


ಬಾಳ್‍ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು.


ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿದ್ದ ಈ ಯೋಧರಲ್ಲದೆ ಕೋಟೆಕೊತ್ತಲಗಳಿದ್ದ ಬೇರೆ ಪಟ್ಟಣಗಳಲ್ಲಿಯೂ ಸೈನಿಕರಾಗಿ ಇದ್ದರು.


ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು