Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:5 - ಕನ್ನಡ ಸತ್ಯವೇದವು C.L. Bible (BSI)

5 ಆದುದರಿಂದ ಸರ್ವೇಶ್ವರ ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದರು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನಘನತೆಗಳು ಹೆಚ್ಚಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದುದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನ ಘನತೆಗಳು ಹೆಚ್ಚಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ಯೆಹೋವನು ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದನು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದದರಿಂದ ಇವನ ಧನಘನತೆಗಳು ಹೆಚ್ಚಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಯೆಹೋಷಾಫಾಟನಿಗಾಗಿ ರಾಜ್ಯದ ಅಧಿಕಾರವನ್ನು ಸ್ಥಿರಪಡಿಸಿದನು. ಯೆಹೂದದ ಜನರೆಲ್ಲರು ಅವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಆದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ದೊರಕಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆದ್ದರಿಂದ ಯೆಹೋವ ದೇವರು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದರು. ಯೆಹೂದವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟದ್ದರಿಂದ, ಅವನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:5
24 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನಿಗೆ ಧನಘನತೆ ಬಹಳವಾಗಿತ್ತು. ಅವನು ಆಹಾಬನೊಡನೆ ಬೀಗತನಮಾಡಿ ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರಿಯಕ್ಕೆ ಹೋದನು.


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.


ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.


ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


ಅನೇಕರು ಸರ್ವೇಶ್ವರನಿಗೆ ಕಾಣಿಕೆಗಳನ್ನೂ ಜುದೇಯದ ಅರಸ ಹಿಜ್ಕೀಯನಿಗೆ ಶ್ರೇಷ್ಠವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲ ರಾಷ್ಟ್ರಗಳವರು ಹಿಜ್ಕೀಯನನ್ನು ಮಹಾನ್‍ವ್ಯಕ್ತಿಯೆಂದು ಸನ್ಮಾನಿಸುತ್ತಿದ್ದರು.


ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II


“ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವರಾದರೆ I ಕೂರುವರು ಸದಾಕಾಲ ಅವರ ಮಕ್ಕಳ ನಿನ್ನಾ ಸಿಂಹಾಸನದ ಮೇಲೆ” II


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II


ಅರಸನ ಕಾಲದಲ್ಲಿ ಜೆರುಸಲೇಮಿನಲ್ಲಿ ಬೆಳ್ಳಿ, ಕಲ್ಲಿನಂತೆಯೂ ದೇವದಾರು ಮರಗಳು, ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ವಿಫುಲವಾಗಿ ಇದ್ದವು.


ಅವನ ಕಾಲದಲ್ಲಿ ಬೆಳ್ಳಿಬಂಗಾರ ಕಲ್ಲಿನಂತೆಯೂ, ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ಜೆರುಸಲೇಮಿನಲ್ಲಿ ವಿಫುಲವಾಗಿದ್ದವು.


ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು.


ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು.


ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು