2 ಪೂರ್ವಕಾಲ ವೃತ್ತಾಂತ 18:10 - ಕನ್ನಡ ಸತ್ಯವೇದವು C.L. Bible (BSI)10 ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ, ಎಂಬುದಾಗಿ ಸರ್ವೇಶ್ವರ ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ [ತಲೆಗೆ ಕಟ್ಟಿಕೊಂಡು] ಬಂದು - ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬದಾಗಿ ಯೆಹೋವನು ಹೇಳುತ್ತಾನೆ ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಚಿದ್ಕೀಯನು ಕೆನಾನನ ಮಗ. ಚಿದ್ಕೀಯನು ಕಬ್ಬಿಣದ ಕೊಂಬುಗಳನ್ನು ತಯಾರಿಸಿ, “ಇದು ಯೆಹೋವನ ನುಡಿ. ಈ ಕಬ್ಬಿಣದ ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ನಾಶಮಾಡುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |