2 ಪೂರ್ವಕಾಲ ವೃತ್ತಾಂತ 18:11 - ಕನ್ನಡ ಸತ್ಯವೇದವು C.L. Bible (BSI)11 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್‍ಗಿಲ್ಯಾದಿಗೆ ಹೋಗಿ, ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು - ರಾಮೋತ್‍ಗಿಲ್ಯಾದಿಗೆ ಹೋಗು; ನೀನು ಕೃತಾರ್ಥನಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಲ್ಲಿದ್ದ ಪ್ರವಾದಿಗಳೆಲ್ಲರೂ ಅದನ್ನೇ ನುಡಿದರು. ಅವರು, “ನೀನು ರಾಮೋತ್‌ಗಿಲ್ಯಾದಿಗೆ ಹೋಗು. ನಿನಗಲ್ಲಿ ಜಯವಾಗುವದು. ಯೆಹೋವನು ಅರಾಮ್ಯರನ್ನು ಸೋಲಿಸುವಂತೆ ನಿನಗೆ ಸಹಾಯಮಾಡುವನು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು. ಅಧ್ಯಾಯವನ್ನು ನೋಡಿ |