Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:14 - ಕನ್ನಡ ಸತ್ಯವೇದವು C.L. Bible (BSI)

14 ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವನು “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶವಾಗುವರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಅರಸನ ಬಳಿಗೆ ಬಂದಾಗ ಅರಸನು - ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವನು - ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶರಾಗುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೀಕಾಯೆಹುವು ಅಹಾಬನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬಹುದೋ?” ಎಂದು ವಿಚಾರಿಸಿದಾಗ ಮೀಕಾಯೆಹುವು, “ಹೋಗಿ, ಯುದ್ಧಮಾಡು. ದೇವರು ಅವರನ್ನು ನಿನ್ನ ಕೈಗಳಿಗೆ ಒಪ್ಪಿಸುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:14
9 ತಿಳಿವುಗಳ ಹೋಲಿಕೆ  

ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು.


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು.


ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;


ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.


ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು