Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:16 - ಕನ್ನಡ ಸತ್ಯವೇದವು C.L. Bible (BSI)

16 ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಯೊಳಗೆ ಹೋಗಲಿ ಎಂದರು,” ಎಂಬುದಾಗಿ ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು - ಇಸ್ರಾಯೇಲ್ಯರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆನು; ಆಗ ಯೆಹೋವನು - ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ ಅಂದನು ಎಂಬದಾಗಿ ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇಸ್ರೇಲಿನ ಜನರೆಲ್ಲರೂ ಬೆಟ್ಟಪ್ರದೇಶಗಳಲ್ಲಿ ಚದರಿರುವದನ್ನು ಕಂಡೆನು. ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಕರ್ತನು ಹೇಳಿದ್ದೇನೆಂದರೆ, ‘ಅವರಿಗೆ ನಾಯಕರಿಲ್ಲ, ಆದ್ದರಿಂದ ಸುರಕ್ಷಿತವಾಗಿ ಮನೆಗೆ ಹಿಂದಿರುಗಲಿ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:16
18 ತಿಳಿವುಗಳ ಹೋಲಿಕೆ  

ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.


ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.


ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.


ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ಆ ಪತ್ರವು ನಿಮಗೆ ಮುಟ್ಟಿದೊಡನೆ ಆ ರಾಜಪುತ್ರರಲ್ಲಿ ಉತ್ತಮನೂ ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ, ನಿಮ್ಮ ಯಜಮಾನನ ಕುಟುಂಬದವರ ಪರವಾಗಿ ಯುದ್ಧಮಾಡಿ,” ಎಂಬುದಾಗಿ ಬರೆದಿತ್ತು.


ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.


ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ಆದುದರಿಂದ ಸೌಲನು ಸತ್ತುಹೋಗಿದ್ದರೂ ನೀವು ಶೂರರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ,” ಎಂದು ಹೇಳಿಸಿದನು.


ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.


ಆಗ ಇಸ್ರಯೇಲರ ಅರಸು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.


ನಿನ್ನ ಪಟ್ಟಣಗಳು ಹಾಳಾಗುವುವು; ನೀ ಕಾಡಾಗುವೆ. ಆಗ ನಾನೇ ಸರ್ವೇಶ್ವರನೆಂದು ನೀನು ತಿಳಿದುಕೊಳ್ಳುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು