2 ಪೂರ್ವಕಾಲ ವೃತ್ತಾಂತ 18:19 - ಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, ‘ಇಸ್ರಯೇಲರ ಅರಸ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರೇಪಿಸಬಲ್ಲಿರಿ?’ ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನು ತನ್ನ ಹತ್ತಿರ ನಿಂತವರನ್ನು - ಇಸ್ರಾಯೇಲ್ಯರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ ಎಂದು ಕೇಳಿದಾಗ ಒಬ್ಬನು ಈ ತರವಾಗಿಯೂ ಇನ್ನೊಬ್ಬನು ಆ ತರವಾಗಿಯೂ ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ‘ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಮಾಡಲು ಅಹಾಬನನ್ನು ಯಾರು ಮರುಳುಗೊಳಿಸುವರು? ಯಾಕೆಂದರೆ ಅಲ್ಲಿ ಅವನು ಸಾಯಬೇಕು’ ಎಂದು ಯೆಹೋವನು ಕೇಳಿದಾಗ ಅಲ್ಲಿ ನಿಂತಿದ್ದವರು ಬೇರೆಬೇರೆ ವಿಧಾನವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಗ ಯೆಹೋವ ದೇವರು, ‘ಇಸ್ರಾಯೇಲಿನ ಅರಸನಾದ ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿ |