Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:29 - ಕನ್ನಡ ಸತ್ಯವೇದವು C.L. Bible (BSI)

29 ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, ‘ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ,” ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಸ್ರಾಯೇಲ್ಯರ ಅರಸನು ಯೆಹೋಷಾಫಾಟನಿಗೆ - ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋಷಾಫಾಟನಿಗೆ ಅಹಾಬನು, “ನಾನು ಯುದ್ಧರಂಗಕ್ಕೆ ಹೋಗುವ ಮೊದಲು ವೇಷ ಬದಲಾಯಿಸುತ್ತೇನೆ. ನೀನು ರಾಜವಸ್ತ್ರದಲ್ಲಿಯೇ ಇರು” ಎಂದು ಹೇಳಿ ತನ್ನ ರೂಪವನ್ನು ಬದಲಾಯಿಸಿದನು. ಇಬ್ಬರು ರಾಜರೂ ಯುದ್ಧರಂಗಕ್ಕಿಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:29
10 ತಿಳಿವುಗಳ ಹೋಲಿಕೆ  

ಆಗ ಸೌಲನು ಉಡಿಗೆತೊಡಿಗೆಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆಗೆ ಬಂದನು. “ದಯವಿಟ್ಟು ನನಗಾಗಿ ಭೂತಪ್ರೇತಗಳಲ್ಲಿ ವಿಚಾರಿಸಿ ಶಾಸ್ತ್ರ ಹೇಳು; ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು,” ಎಂದು ಆಕೆಯನ್ನು ಬೇಡಿಕೊಂಡನು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ಹಗೆಗಾರ ಸವಿನುಡಿದರೂ ನಂಬಬೇಡ; ಹೃದಯದಲ್ಲಿದೆ ಏಳ್ಮಡಿ ಹೇಯ ಕೃತ್ಯ.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ವ್ಯಭಿಚಾರಿ ಸಂಜೆಯನೇ ಎದುರು ನೋಡುತ್ತಿರುತ್ತಾನೆ ಯಾರೂ ತನ್ನನ್ನು ಕಾಣದಂತೆ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಾನೆ.


ಆಗ ಇವನು ತನ್ನ ಗುರುತು ತಿಳಿಯಬಾರದೆಂದು ರುಮಾಲಿನಿಂದ ಕಣ್ಣುಗಳನ್ನು ಮುಚ್ಚಿಕೊಂಡು, ಅರಸನು ಬರುವ ದಾರಿಯಲ್ಲಿ ಕಾದು ನಿಂತನು.


ಇಸ್ರಯೇಲರ ಅರಸನು ಹಾಗೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಮೋತ್‍ಗಿಲ್ಯಾದಿಗೆ ವಿರುದ್ಧ ಯುದ್ಧಕ್ಕೆ ಹೊರಟರು.


ಸಿರಿಯಾದವರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿಯಿಡಿ", ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು