Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?", ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಇಸ್ರಾಯೇಲ್ಯರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ - ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ ಬಾರದೋ ಎಂದು ಕೇಳಲು ಅವರು - ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಅಹಾಬನು ನಾನೂರು ಮಂದಿ ಪ್ರವಾದಿಗಳನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಾವು ರಾಮೋತ್‌ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೊರಡಬೇಕೋ ಬೇಡವೋ?” ಎಂದು ಕೇಳಿದಾಗ ಆ ಪ್ರವಾದಿಗಳು ಅಹಾಬನಿಗೆ, “ಹೋಗು, ದೇವರು ರಾಮೋತ್‌ಗಿಲ್ಯಾದನ್ನು ಸೋಲಿಸುವಂತೆ ಮಾಡುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:5
22 ತಿಳಿವುಗಳ ಹೋಲಿಕೆ  

ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”


ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವನು “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶವಾಗುವರು,” ಎಂದು ಹೇಳಿದನು.


ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು.


ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು.


ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;


ಅನಂತರ, “ಸರ್ವೇಶ್ವರನ ಸನ್ನಿಧಿಯಲ್ಲಿ ಈ ಬಗ್ಗೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಕೇಳಿಕೊಂಡನು.


ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿ ಇಲ್ಲವೇ?” ಎಂದು ಕೇಳಿದನು. ಅವನು,


ನನ್ನ ತಂದೆ ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು