Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:9 - ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು; ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲ್ಯರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯಪಟ್ಟಣದ ಹೆಬ್ಬಾಗಲಿನ ಹತ್ತಿರವಿರುವ ಬೈಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕೂತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಸ್ರೇಲರ ಅರಸನಾದ ಅಹಾಬನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ತಮ್ಮ ರಾಜವಸ್ತ್ರಗಳನ್ನು ಧರಿಸಿದ್ದರು. ಅವರು ಸಮಾರ್ಯ ಪಟ್ಟಣದ ಮುಂಭಾಗದ ಬಾಗಿಲಿನೆದುರು ಸಿಂಹಾಸನಗಳ ಮೇಲೆ ಕುಳಿತಿದ್ದರು. ಆ ನಾನೂರು ಮಂದಿ ಪ್ರವಾದಿಗಳು ಅವರ ಮುಂದೆ ನಿಂತುಕೊಂಡು ಪ್ರವಾದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು, ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:9
12 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.


ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.


ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.


ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.


ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, ‘ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ,” ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು.


ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.


ಆಗ ಇಸ್ರಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಬೇಗ ಹೋಗಿ ಇಮ್ಲನ ಮಗ ಮೀಕಾಯೆಹುವನ್ನು ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದನು.


ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ, ಎಂಬುದಾಗಿ ಸರ್ವೇಶ್ವರ ಹೇಳುತ್ತಾರೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು