Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:10 - ಕನ್ನಡ ಸತ್ಯವೇದವು C.L. Bible (BSI)

10 ಜುದೇಯದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರಲ್ಲಿ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಸರ್ವೇಶ್ವರನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ಹಾಗೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೂದದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ ಅದು ನಿಮ್ಮ ಮುಂದೆ ಬರುವದಾದರೆ ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆಯೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆಯೂ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವದಾದರೆ ನೀವು ನಿರ್ದೋಷಿಗಳಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಿಮ್ಮ ಬಳಿಗೆ ಕೊಲೆಯ ಪ್ರಕರಣಗಳ ಬಗ್ಗೆ, ಕಟ್ಟಳೆಯ ಬಗ್ಗೆ, ಆಜ್ಞೆಯ ಬಗ್ಗೆ, ನಿಯಮದ ಬಗ್ಗೆ ಮತ್ತು ಬೇರೆ ಯಾವುದಾದರೂ ಕಟ್ಟಳೆಯ ಬಗ್ಗೆ ಬಗೆಹರಿಸಲು ಬರಬಹುದು. ಅವೆಲ್ಲಾ ನಿಮ್ಮ ಸಹೋದರರಿಂದಲೇ ಬರುವವು. ದೇವರಿಗೆ ವಿರುದ್ಧವಾಗಿ ಪಾಪಮಾಡಬಾರದೆಂಬುದಾಗಿ ಅವರಿಗೆಲ್ಲಾ ಎಚ್ಚರಿಸಬೇಕು. ನೀವು ನಂಬಿಗಸ್ತಿಕೆಯಿಂದ ಸೇವೆಮಾಡದಿದ್ದಲ್ಲಿ ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ದೇವರ ಕೋಪ ಉರಿಯುವಂತೆ ಮಾಡಿಕೊಳ್ಳುವಿರಿ. ನೀವು ತಪ್ಪಿತಸ್ಥರಾಗದೆ ನಂಬಿಗಸ್ತಿಕೆಯಿಂದ ಸೇವೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಜೀವಹತ್ಯ, ನ್ಯಾಯಕ್ಕೂ, ಆಜ್ಞೆಗೂ, ನಿಯಮಗಳಿಗೂ, ನ್ಯಾಯತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ, ರೌದ್ರವು ನಿಮ್ಮ ಮೇಲೆಯೂ, ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ. ಆಗ ನೀವು ಅಪರಾಧವಿಲ್ಲದವರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:10
13 ತಿಳಿವುಗಳ ಹೋಲಿಕೆ  

ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.


“ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥ ಮನಸ್ಸಿನಿಂದಲೂ ಕಾರ್ಯನಿರ್ವಹಿಸತಕ್ಕದ್ದು.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಅವರಲ್ಲಿ ವ್ಯಾಜ್ಯವೇನಾದರು ಉಂಟಾದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ, ಅವರಿಗೆ ನ್ಯಾಯ ತೀರಿಸಿ, ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ,” ಎಂದು ಉತ್ತರಿಸಿದನು.


ಸರ್ವೇಶ್ವರನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು