Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:4 - ಕನ್ನಡ ಸತ್ಯವೇದವು C.L. Bible (BSI)

4 ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸವಾಗಿದ್ದು, ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಯಿಮ್ ಪರ್ವತದವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಜರ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋಷಾಫಾಟನು ಯೆರೂಸಲೇವಿುನಲ್ಲಿ ವಾಸವಾಗಿದ್ದು ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದವರೆಗೂ ಸಂಚರಿಸಿ ತನ್ನ ಪ್ರಜೆಗಳನ್ನು ಅವರ ಪಿತೃಗಳ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಬೇರ್ಷೆಬ ನಗರದಿಂದ ಹಿಡಿದು ಎಫ್ರಾಯೀಮ್ ಬೆಟ್ಟದ ಪ್ರದೇಶದ ಜನರನ್ನೆಲ್ಲಾ ಸಂದರ್ಶಿಸಿದನು. ಯೆಹೋಷಾಫಾಟನು ಈ ಜನರನ್ನೆಲ್ಲ ಅವರ ಪೂರ್ವಿಕರ ದೇವರಾದ ಯೆಹೋವನ ಬಳಿಗೆ ಮತ್ತೆ ಕರೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದನು. ಅವನು ತಿರುಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯೀಮನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಕಡೆಗೆ ಅವರನ್ನು ತಿರುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:4
12 ತಿಳಿವುಗಳ ಹೋಲಿಕೆ  

ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.


ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು.


ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು