Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 19:7 - ಕನ್ನಡ ಸತ್ಯವೇದವು C.L. Bible (BSI)

7 ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೀಗಿರುವಲ್ಲಿ ನಿಮಗೆ ಯೆಹೋವನ ಭಯವು ಇರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ ಮುಖದಾಕ್ಷಿಣ್ಯವೂ ಲಂಚತಿನ್ನುವದೂ ಇಲ್ಲವಾದದರಿಂದ ಜಾಗರೂಕತೆಯಿಂದ ಕೆಲಸಮಾಡಿರಿ ಎಂದು ಎಚ್ಚರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 19:7
27 ತಿಳಿವುಗಳ ಹೋಲಿಕೆ  

“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.


ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.


ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ಲಂಚವನ್ನು ತೆಗೆದುಕೊಳ್ಳಬಾರದು. ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿಸುತ್ತದೆ; ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ಕೆಡಿಸುತ್ತದೆ.


ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಅನ್ಯಾಯವಾದ ತೀರ್ಪನು ಕೊಡುತ್ತಾನೆಯೆ ದೇವರು? ಸತ್ಯವನ್ನು ಡೊಂಕುಮಾಡುತ್ತಾನೆಯೆ ಸರ್ವಶಕ್ತನು?


ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡುತುಂಡು ಮಾಡಿ, ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಯೇಲರ ಎಲ್ಲ ಪ್ರಾಂತ್ಯಗಳಿಗೆ ಕಳುಹಿಸಿದನು. “ಯಾರು ಸೌಲ ಹಾಗು ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳನ್ನು ಹೀಗೆಯೇ ಕಡಿಯಲಾಗುವುದು,” ಎಂದು ಹೇಳಿಸಿದನು. ಸರ್ವೇಶ್ವರನ ಭಯಭಕ್ತಿಯಿಂದ ಪ್ರೇರಿತರಾದ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿಬಂದರು.


ನೀವು ಗುಟ್ಟಾಗಿ ಪಕ್ಷಪಾತಮಾಡಿದರೂ ಆತ ನಿಮ್ಮನ್ನು ಖಂಡಿಸದೆ ಬಿಡನು.


“ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು