2 ಪೂರ್ವಕಾಲ ವೃತ್ತಾಂತ 19:9 - ಕನ್ನಡ ಸತ್ಯವೇದವು C.L. Bible (BSI)9 “ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥ ಮನಸ್ಸಿನಿಂದಲೂ ಕಾರ್ಯನಿರ್ವಹಿಸತಕ್ಕದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರಿಗೆ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸಗಳು ಯಾವುದೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥಮನಸ್ಸಿನಿಂದಲೂ ಮಾಡತಕ್ಕ ಕೆಲಸವು ಯಾವದಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋಷಾಫಾಟನು ಅವರಿಗೆ, “ನೀವು ಹೃದಯಪೂರ್ವಕವಾಗಿ ನಿಮ್ಮ ಕೆಲಸ ನಡಿಸಬೇಕು. ನೀವು ಯೆಹೋವನಿಗೆ ಭಯಪಡುವವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನೀವು ಈ ಕಾರ್ಯವನ್ನು ಯೆಹೋವ ದೇವರ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣಹೃದಯದಿಂದಲೂ ಮಾಡಬೇಕು. ಅಧ್ಯಾಯವನ್ನು ನೋಡಿ |
ಜುದೇಯದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರಲ್ಲಿ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಸರ್ವೇಶ್ವರನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ಹಾಗೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗುವಿರಿ.