Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:12 - ಕನ್ನಡ ಸತ್ಯವೇದವು C.L. Bible (BSI)

12 ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಯೇಲ್ ದೇವರಾದ ಸರ್ವೇಶ್ವರ ತಮಗಾಗಿ ಒಂದು ದೇವಾಲಯವನ್ನೂ ರಾಜನಿಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ ಹಾಗೂ ವಿವೇಕಗಳುಳ್ಳ ಒಬ್ಬ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದಾರೆ; ಅವರಿಗೆ ಸ್ತೋತ್ರವಾಗಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಾಯೇಲ್ ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ, ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ, ವಿವೇಕವುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದರಿಂದ ಆತನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಭೂಮ್ಯಾಕಾಶಗಳನ್ನುಂಟುಮಾಡಿದ ಇಸ್ರಾಯೇಲ್‍ದೇವರಾದ ಯೆಹೋವನು ತನಗೋಸ್ಕರ ದೇವಾಲಯವನ್ನೂ ರಾಜನಿಗೋಸ್ಕರ ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ ಜ್ಞಾನವಿವೇಕಗಳುಳ್ಳ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟದರಿಂದ ಆತನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ, ಆತನು ಭೂಪರಲೋಕಗಳನ್ನು ಉಂಟುಮಾಡಿದನು. ಅರಸನಾದ ದಾವೀದನಿಗೆ ಒಬ್ಬ ಜ್ಞಾನವುಳ್ಳ ಮಗನನ್ನು ಅನುಗ್ರಹಿಸಿದ್ದಾನೆ. ನಿನಗೆ ಜ್ಞಾನವೂ ತಿಳುವಳಿಕೆಯೂ ಇರುವದರಿಂದ ನೀನು ದೇವಾಲಯವನ್ನು ಕಟ್ಟುವೆ ಮತ್ತು ನಿನಗೂ ಒಂದು ಅರಮನೆಯನ್ನು ಕಟ್ಟುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಹೀರಾಮನು, “ಯೆಹೋವ ದೇವರಿಗೋಸ್ಕರ ಆಲಯವನ್ನೂ ತನ್ನ ರಾಜ್ಯಕ್ಕೋಸ್ಕರ ಅರಮನೆಯನ್ನೂ ಕಟ್ಟಿಸುವುದಕ್ಕೆ ಅರಸನಾದ ದಾವೀದನಿಗೆ ಬುದ್ಧಿ ವಿವೇಚನೆಯುಳ್ಳ ಒಬ್ಬ ಮಗನನ್ನು ಕೊಟ್ಟಿದ್ದಾರೆ; ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:12
21 ತಿಳಿವುಗಳ ಹೋಲಿಕೆ  

ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ನಮಗುದ್ಧಾರ ಪ್ರಭುವಿನ ನಾಮದಲಿ I ಭೂಮ್ಯಾಕಾಶವನು ಸೃಜಿಸಿದಾತನಲಿ II


ಆದಿಯಲೆ ನೀ ಭುವಿಗೆ ಅಸ್ತಿವಾರ ಹಾಕಿದೆ I ಗಗನಮಂಡಲವು ಸಹ ನಿನ್ನ ಸೃಷ್ಟಿಯಾಗಿದೆ II


ಕೂಗಿ ನಾ ನಿಟ್ಟುಸಿರಿಟ್ಟೆ I ಎಲುಬು ತೊಗಲು ಆಗಿಬಿಟ್ಟೆ II


ಸೊಲೊಮೋನನು ಸರ್ವೇಶ್ವರನ ಹೆಸರಿಗಾಗಿ ಒಂದು ಅರಮನೆಯನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿದನು.


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.


ನಾನು ಈಗ ಜ್ಞಾನಿಯೂ ಕಲಾಪ್ರವೀಣನೂ ಆದ ಒಬ್ಬ ವ್ಯಕ್ತಿಯನ್ನು ಕಳುಹಿಸುತ್ತೇನೆ; ಇವನ ಹೆಸರು ಹೂರಾಮಾಬೀ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು