2 ಪೂರ್ವಕಾಲ ವೃತ್ತಾಂತ 2:16 - ಕನ್ನಡ ಸತ್ಯವೇದವು C.L. Bible (BSI)16 ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ, ಸಮುದ್ರ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ಅಲ್ಲಿಂದ ನೀನು ಅವುಗಳನ್ನು ಯೆರೂಸಲೇಮಿಗೆ ತರಿಸಿಕೊಳ್ಳಬಹುದು” ಎಂಬುದಾಗಿ ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾವಾದರೋ ನಿನಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು ತೆಪ್ಪಗಳಾಗಿ ಕಟ್ಟಿ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀನು ಅವುಗಳನ್ನು ಯೆರೂಸಲೇವಿುಗೆ ತರಿಸಿಕೊಳ್ಳಬಹುದು ಎಂಬದಾಗಿ ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ಅವುಗಳನ್ನು ಜೋಡಿಸಿ ತೆಪ್ಪಗಳನ್ನಾಗಿ ಮಾಡಿ ಸಮುದ್ರದಲ್ಲಿ ತೇಲಿಬಿಡುವೆವು. ಅವು ಯೊಪ್ಪಕ್ಕೆ ತಲುಪಿದಾಗ ನೀನು ಅವುಗಳನ್ನು ಶೇಖರಿಸಿ ಬೇಕಾದ ಕಡೆಗೆ ರವಾನಿಸು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.” ಅಧ್ಯಾಯವನ್ನು ನೋಡಿ |
ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.