2 ಪೂರ್ವಕಾಲ ವೃತ್ತಾಂತ 2:3 - ಕನ್ನಡ ಸತ್ಯವೇದವು C.L. Bible (BSI)3 ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಇದಲ್ಲದೆ ಅವನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೂರಾಮನಿಗೆ - ನನ್ನ ತಂದೆಯಾದ ದಾವೀದನು ತನ್ನ ವಾಸಕ್ಕೋಸ್ಕರ ಅರಮನೆಯನ್ನು ಕಟ್ಟಿಸಿಕೊಳ್ಳುವದಕ್ಕಾಗಿ ನೀನು ಅವನಿಗೆ ದೇವದಾರುಮರಗಳನ್ನು ಕಳುಹಿಸಿದಿಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸೊಲೊಮೋನನು ತನ್ನ ಸ್ನೇಹಿತನೂ ತೂರ್ ದೇಶದ ರಾಜನೂ ಆದ ಹೂರಾಮನಿಗೆ ಹೀಗೆ ಬರೆದು ಕಳುಹಿಸಿದನು: “ನನ್ನ ತಂದೆಯಾದ ದಾವೀದನ ಅರಮನೆಗೆ ಬೇಕಾದ ದೇವದಾರುಮರಗಳನ್ನು ನೀನು ಒದಗಿಸಿದಂತೆಯೇ ನನಗೂ ನೀನು ಸಹಾಯ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.