2 ಪೂರ್ವಕಾಲ ವೃತ್ತಾಂತ 2:4 - ಕನ್ನಡ ಸತ್ಯವೇದವು C.L. Bible (BSI)4 ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನನ್ನ ದೇವರಾದ ಯೆಹೋವನ ನಾಮದ ಘನತೆಗಾಗಿ ನಾನು ಒಂದು ದೇವಾಲಯವನ್ನು ಕಟ್ಟಲಿರುವೆನು. ಆತನ ಸನ್ನಿಧಿಯಲ್ಲಿ ನಿತ್ಯವೂ ಧೂಪವನ್ನು ಹಾಕುವೆವು; ವಿಶೇಷ ಮೇಜಿನ ಮೇಲೆ ಪವಿತ್ರವಾದ ರೊಟ್ಟಿಗಳನ್ನಿಡುವೆವು. ಪ್ರತಿ ಮುಂಜಾನೆ ಮತ್ತು ಸಾಯಂಕಾಲಗಳಲ್ಲಿ, ಸಬ್ಬತ್ ದಿನಗಳಲ್ಲಿ ಮತ್ತು ಅಮಾವಾಸ್ಯೆ ದಿನಗಳಲ್ಲಿ ಯೆಹೋವನು ಆಜ್ಞಾಪಿಸಿದ ಹಬ್ಬಗಳಲ್ಲಿ ಸರ್ವಾಂಗಹೋಮಗಳನ್ನು ಸಮರ್ಪಿಸುವೆವು. ಇಸ್ರೇಲಿನ ಜನರು ನಿತ್ಯಕಾಲಕ್ಕೂ ಇವುಗಳನ್ನು ಅನುಸರಿಸಬೇಕೆಂದು ದೇವರು ನೇಮಿಸಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.