Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:6 - ಕನ್ನಡ ಸತ್ಯವೇದವು C.L. Bible (BSI)

6 ಅವರಿಗೆ ಆಲಯವನ್ನು ಕಟ್ಟುವುದಕ್ಕೆ ಯಾರೂ ಶಕ್ತರಲ್ಲ; ಆಕಾಶವೂ ಉನ್ನತೋನ್ನತವಾದ ಆಕಾಶವೂ ಅವರ ವಾಸಕ್ಕೆ ಸಾಲದಿರುವಲ್ಲಿ ಅವರಿಗಾಗಿ ಆಲಯವನ್ನು ಕಟ್ಟುವುದಕ್ಕೆ ಯಾರು ತಾನೆ ಶಕ್ತರು? ನಾನು ಅವರ ಸನ್ನಿಧಿಯಲ್ಲಿ ಧೂಪಾರತಿ ಎತ್ತುವ ಒಂದು ಸ್ಥಳವನ್ನು ಕಟ್ಟಿಸಬಲ್ಲೆನೇ ಹೊರತು, ಅವರ ವಾಸಕ್ಕಾಗಿ ಆಲಯವನ್ನು ಕಟ್ಟಿಸುವುದಕ್ಕೆ ನಾನು ಎಷ್ಟು ಮಾತ್ರಕ್ಕೂ ಶಕ್ತನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಆತನಿಗೋಸ್ಕರ ಆಲಯವನ್ನು ಕಟ್ಟುವುದಕ್ಕೆ ಶಕ್ತರಾರು! ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಾಗ ಆತನಿಗಾಗಿ ಆಲಯ ಕಟ್ಟಲು ಸಾಧ್ಯವಿಲ್ಲ. ಆತನ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಆತನಿಗೆ ಮನೆಯನ್ನು ಕಟ್ಟಿಸಲು ನಾನು ಎಷ್ಟರವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನಿಗೋಸ್ಕರ ಆಲಯವನ್ನು ಕಟ್ಟುವದಕ್ಕೆ ಶಕ್ತರಾರು! ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲದಿರುವಲ್ಲಿ ಆತನಿಗೋಸ್ಕರ ಆಲಯವನ್ನು ಕಟ್ಟುವದಕ್ಕೆ ಶಕ್ತರಾರು! ನಾನು ಆತನ ಸನ್ನಿಧಿಯಲ್ಲಿ ಧೂಪಹಾಕುವ ಉದ್ದೇಶದಿಂದ ಹೊರತು ಆತನ ವಾಸಕ್ಕಾಗಿ ಆಲಯವನ್ನು ಕಟ್ಟಿಸುವದಕ್ಕೆ ಎಷ್ಟರವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾವನೂ ದೇವರಿಗೆ ಆಲಯವನ್ನು ಕಟ್ಟಲು ಸಾಧ್ಯವಿಲ್ಲ. ಯಾಕೆಂದರೆ, ಆಕಾಶವೂ ಉನ್ನತೋನ್ನತವಾದ ಆಕಾಶವೂ ಆತನ ವಾಸಕ್ಕೆ ಸಾಲುವುದಿಲ್ಲ. ಆದ್ದರಿಂದ ನಾನು ಆತನಿಗೆ ಆಲಯವನ್ನು ಕಟ್ಟಲಾರೆ. ನಾನು ಆತನಿಗೆ ಆಲಯವನ್ನು ಕಟ್ಟುತ್ತಿರುವುದು ಧೂಪಹಾಕಿ ಆತನನ್ನು ಘನಪಡಿಸುವದಕ್ಕಾಗಿಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಅವರಿಗೋಸ್ಕರ ಆಲಯವನ್ನು ಕಟ್ಟಿಸಲು ಸಮರ್ಥನಾದವನು ಯಾರು? ಆಕಾಶವೂ ಉನ್ನತೋನ್ನತ ಆಕಾಶವೂ ಅವರಿಗೆ ಸಾಲದು. ಅವರ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಅವರಿಗೆ ಆಲಯವನ್ನು ಕಟ್ಟಿಸಲು ನಾನು ಎಷ್ಟರವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:6
19 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು.


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!


ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?


“ಆದರೆ ನಿಮ್ಮ ಬಳಿಯಿರುವ ದೇವರ ವಸ್ತುಗಳನ್ನು ಹಾಗು ಹರಕೆಮಾಡಿದ್ದನ್ನೂ ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.


ನಿಮ್ಮ ಯಾವುದಾದರೊಂದು ಕುಲದಲ್ಲಿ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ದಹನಬಲಿಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸುವ ಎಲ್ಲಾ ಆಚಾರಗಳನ್ನು ನಡೆಸಬೇಕು.


ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ರತ್ನಗಳನ್ನು ಕೆತ್ತಿ ಮರದಲ್ಲಿ ವಿಚಿತ್ರವಾದ ಕೆತ್ತನೆ ಕೆಲಸವನ್ನು ಮಾಡುವನು; ಇವೇ ಮೊದಲಾದ ಸಮಸ್ತ ಶೃಂಗಾರ ಕೆಲಸವನ್ನು ಮಾಡುವನು.


ಅರಸ ಸೊಲೊಮೋನನು ಟೈರ್ ಪಟ್ಟಣದಿಂದ ಹೀರಾಮ್ ಎಂಬವನನ್ನು ಕರೆಸಿದನು.


ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.


ನೀನು ಇನ್ನೂ ಹೆಚ್ಚು ಕೂಡಿಸುವೆ. ಇದಲ್ಲದೆ, ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರು, ಶಿಲ್ಪಿಗಳು, ಬಡಗಿಯವರು ಹಾಗು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಈ ಮುಂತಾದ ಕೆಲಸವನ್ನು ಮಾಡುವ ನಿಪುಣರು ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವುದಕ್ಕಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು