Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:1 - ಕನ್ನಡ ಸತ್ಯವೇದವು C.L. Bible (BSI)

1 ಸ್ವಲ್ಪಕಾಲವಾದ ಮೇಲೆ ಮೋವಾಬ್ಯರು, ಅಮ್ಮೋನಿಯರು ಹಾಗು ಮೆಗೂನ್ಯರಲ್ಲಿ ಕೆಲವರು ಯೆಹೋಷಾಫಾಟನಿಗೆ ವಿರುದ್ಧ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರೋಧವಾಗಿ ಯುದ್ಧಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಲಕಾಲದನಂತರ ಮೋವಾಬ್ಯರೂ ಅಮ್ಮೋನಿಯರೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನೊಂದಿಗೆ ಯುದ್ಧಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ ಮೋವಾಬ್ಯರೂ, ಅಮ್ಮೋನಿಯರೂ, ಮೆಗೂನ್ಯರೂ ಯೆಹೋಷಾಫಾಟನ ಮೇಲೆ ಯುದ್ಧಮಾಡಲು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:1
15 ತಿಳಿವುಗಳ ಹೋಲಿಕೆ  

ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ಯೆಹೂದ ಜನತೆ ಪೇಳ್ವರವರಿಗೆ : “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ".


ಈ ಧಾರ್ಮಿಕ ಸುಧಾರಣೆಗಳಾದ ನಂತರ ಅಸ್ಸೀರಿಯಾದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಜುದೇಯಕ್ಕೆ ನುಗ್ಗಿದನು. ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಮುತ್ತಿಗೆ ಹಾಕಿದನು.


ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು.


ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ.


ಜುದೇಯ ನಾಡಿನ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.


ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಯೆಹೂದದ ಅರಸ ಹಿಜ್ಕೀಯನ ಕಾಲದಲ್ಲಿ ಮೇಲೆ ನಮೂದಿಸಿದ ಪುರುಷರು ಅಲ್ಲಿ ವಾಸಿಸುತ್ತಿದ್ದ ಹಾಮ್ಯರನ್ನೂ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮ ಮಾಡಿದರು. ತಮ್ಮ ಆಡುಕುರಿಗಳಿಗಾಗಿ ಧಾರಾಳವಾಗಿ ಹುಲ್ಲುಗಾವಲುಗಳಿದ್ದುದರಿಂದ ಅಲ್ಲಿಯೇ ಸ್ಥಿರವಾಗಿ ನೆಲೆಸಿದರು.


ಈ ಅಮ್ಮೋನಿಯರನ್ನು, ಮೋವಾಬ್ಯರನ್ನು ಹಾಗೂ ಸೇಯಿರ ಪರ್ವತಪ್ರದೇಶದವರನ್ನು ನೋಡಿರಿ; ಇಸ್ರಯೇಲರು ಈಜಿಪ್ಟ್ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿಮ್ಮಿಂದ ಅಪ್ಪಣೆ ಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲವೆ?”


ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.


ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದ ಮೂರು ಲಕ್ಷ ಮಂದಿ ಯೆಹೂದ್ಯರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರು ರಣವೀರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು