Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:10 - ಕನ್ನಡ ಸತ್ಯವೇದವು C.L. Bible (BSI)

10 ಈ ಅಮ್ಮೋನಿಯರನ್ನು, ಮೋವಾಬ್ಯರನ್ನು ಹಾಗೂ ಸೇಯಿರ ಪರ್ವತಪ್ರದೇಶದವರನ್ನು ನೋಡಿರಿ; ಇಸ್ರಯೇಲರು ಈಜಿಪ್ಟ್ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿಮ್ಮಿಂದ ಅಪ್ಪಣೆ ಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತಪ್ರದೇಶದವರನ್ನೂ ನೋಡು; ಇಸ್ರಾಯೇಲ್ಯರು ಐಗುಪ್ತದೇಶದಿಂದ ಬರುತ್ತಿದ್ದಾಗ ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ ಇವರನ್ನು ಸಂಹರಿಸದೆ ವಾರೆಯಾಗಿ ಹೋದರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಈಗ ಅಮ್ಮೋನಿಯರೂ ಮೋವಾಬಿನವರೂ ಸೇಯೀರ್ ಬೆಟ್ಟಪ್ರದೇಶದವರೂ ನಮಗೆ ವಿರೋಧವಾಗಿ ಬಂದಿದ್ದಾರೆ. ಈಜಿಪ್ಟಿನಿಂದ ಇಸ್ರೇಲರು ಹೊರಬಂದಾಗ ಅವರ ದೇಶದೊಳಗಿಂದ ಪ್ರಯಾಣ ಮಾಡಲು ನೀನು ಬಿಡಲಿಲ್ಲ. ಆದ್ದರಿಂದ ಇಸ್ರೇಲರು ಅವರನ್ನು ನಾಶಮಾಡದೆ ಬೇರೆ ಕಡೆಗೆ ತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:10
10 ತಿಳಿವುಗಳ ಹೋಲಿಕೆ  

ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿ. ನಾನು ಆ ನಾಡನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ನಿಮಗೆ ಅದರಲ್ಲಿ ಕಿಂಚಿತ್ತು ಭಾಗವನ್ನೂ ಕೊಡುವುದಿಲ್ಲ.


ಆಗ ಸರ್ವೇಶ್ವರ ನನಗೆ, ‘ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸೊತ್ತನ್ನು ಕೊಡುವುದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕು.’ ಎಂದು ಆಜ್ಞಾಪಿಸಿದರು.


ಸ್ವಲ್ಪಕಾಲವಾದ ಮೇಲೆ ಮೋವಾಬ್ಯರು, ಅಮ್ಮೋನಿಯರು ಹಾಗು ಮೆಗೂನ್ಯರಲ್ಲಿ ಕೆಲವರು ಯೆಹೋಷಾಫಾಟನಿಗೆ ವಿರುದ್ಧ ಯುದ್ಧಕ್ಕೆ ಬಂದರು.


ಅವರು ಉತ್ಸಾಹಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಸರ್ವೇಶ್ವರ ಯೆಹೂದ್ಯರಿಗೆ ವಿರುದ್ಧ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್‍ಪರ್ವತದವರನ್ನೂ ನಶಿಸುವುದಕ್ಕಾಗಿ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರು. ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್‍ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು.


ಮೊವಾಬ್ಯ, ಹಗ್ರೀಯ, ಫಿಲಿಷ್ಟಿಯ, ಟೈರ್ ಜನರು I ಒಮ್ಮತದಿಂದಿವರೆಲ್ಲರು ಒಟ್ಟುಗೂಡಿಹರು I ನಿನ್ನ ವಿರುದ್ಧವಾಗಿ ಒಳಸಂಚು ಮಾಡಿಹರು II


ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು