Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:11 - ಕನ್ನಡ ಸತ್ಯವೇದವು C.L. Bible (BSI)

11 ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀವು ನಮಗೆ ಅನುಗ್ರಹಿಸಿದ ಸೊತ್ತಿನಿಂದ ನಮ್ಮನ್ನು ಹೊರತಳ್ಳುವುದಕ್ಕಾಗಿ, ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈಗ ಇವರು ಉಪಕಾರಕ್ಕೆ ಅಪಕಾರಮಾಡಿ ನೀನು ನಮಗೆ ಅನುಗ್ರಹಿಸಿದ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಪಡಿಸುವದಕ್ಕೋಸ್ಕರ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರನ್ನು ನಾಶಮಾಡದೆ ಹೋದದ್ದಕ್ಕೆ ಈಗ ಅವರು ಮಾಡುತ್ತಿರುವುದನ್ನು ನೀನೇ ನೋಡು. ನೀನು ನಮಗೆ ಕೊಟ್ಟ ದೇಶದಿಂದ ನಮ್ಮನ್ನು ಹೊರಡಿಸಲು ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ಬಂದು, ನೀವು ನಮಗೆ ಸ್ವಾಧೀನಮಾಡಿಕೊಳ್ಳಲು ಕೊಟ್ಟ ನಿಮ್ಮ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಡಿಸುವುದರಿಂದ ನಮಗೆ ಪ್ರತೀಕಾರ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:11
12 ತಿಳಿವುಗಳ ಹೋಲಿಕೆ  

ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.


ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು.


ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II


ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ?


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಈಗ ನಮಗೆ ತಿಳಿದಿರುವಂತೆ ನಿಮಗಿಂತ ದೊಡ್ಡವೂ ಬಲಿಷ್ಠವೂ ಆದ ಜನಾಂಗಗಳನ್ನು ಹೊರಡಿಸಿ ಅವರ ನಾಡಲ್ಲೆ ನಿಮ್ಮನ್ನು ಸೇರಿಸಿ, ಆ ನಾಡನ್ನು ನಿಮಗೇ ಸ್ವಂತ ನಾಡನ್ನಾಗಿ ಕೊಡಲು ಸಂಕಲ್ಪಿಸಿದ್ದಾರೆ. ತಾವೇ ನಿಮ್ಮೊಂದಿಗಿದ್ದು, ತಮ್ಮ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆದುತಂದಿದ್ದಾರೆ.


“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.


ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು