2 ಪೂರ್ವಕಾಲ ವೃತ್ತಾಂತ 20:12 - ಕನ್ನಡ ಸತ್ಯವೇದವು C.L. Bible (BSI)12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಮ್ಮ ದೇವರೇ, ನೀನೇ ಅವರನ್ನು ಶಿಕ್ಷಿಸು. ನಮಗೆ ವಿರುದ್ಧವಾಗಿ ಬರುತ್ತಿರುವ ಅವರ ದೊಡ್ಡಸೈನ್ಯವನ್ನು ಎದುರಿಸಲು ನಮ್ಮಿಂದಾಗದು. ಏನು ಮಾಡಬೇಕೋ ನಮಗೆ ತಿಳಿಯುತ್ತಿಲ್ಲ. ನಾವು ನಿನ್ನ ಸಹಾಯವನ್ನೇ ಎದುರುನೋಡುತ್ತಿದ್ದೇವೆ” ಎಂದು ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು. ಅಧ್ಯಾಯವನ್ನು ನೋಡಿ |