Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:14 - ಕನ್ನಡ ಸತ್ಯವೇದವು C.L. Bible (BSI)

14 ಆಗ ಆ ಸಮೂಹದೊಳಗೆ ಆಸಾಫನ ವಂಶದವನೂ ಲೇವಿಯನೂ ಆದ ಯಹಜೀಯೇಲನ ಮೇಲೆ ಸರ್ವೇಶ್ವರನ ಆತ್ಮ ಇಳಿದು ಬಂದಿತು. ಇವನು ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ ಬೆನಾಯನ ಮೊಮ್ಮಗನೂ ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ಜೆಕರ್ಯನ ಮಗನಾದ ಯೆಹಜೀಯೇಲನ ಮೇಲೆ ಯೆಹೋವನ ಆತ್ಮನು ಬಂದನು. ಜೆಕರ್ಯನು ಬೆನಾಯನ ಮಗ. ಬೆನಾಯನು ಯೆಗೀಯೇಲನ ಮಗ. ಯೆಗೀಯೇಲನು ಮತ್ತನ್ಯನ ಮಗ. ಯೆಹಜೀಯೇಲನು ಲೇವಿಯನಾಗಿದ್ದನು ಮತ್ತು ಆಸಾಫನ ಸಂತತಿಯವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:14
11 ತಿಳಿವುಗಳ ಹೋಲಿಕೆ  

ಓದೇದನ ಮಗ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.


ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು.


ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.


ಎಲ್ಲ ಯೆಹೂದ್ಯರೂ ಅವರ ಮಡದಿಮಕ್ಕಳೂ ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು