Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:16 - ಕನ್ನಡ ಸತ್ಯವೇದವು C.L. Bible (BSI)

16 ನಾಳೆ ಬೆಳಿಗ್ಗೆ ಅವರಿಗೆ ವಿರೋಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್‍ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರುವೇಲ್ ಮರುಭೂಮಿಯ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾಳೆ ಬೆಳಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾಳೆ ಬೆಳಿಗ್ಗೆ ಅವರಿಗೆ ವಿರೋಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾಳೆ ಅವರ ವಿರುದ್ಧವಾಗಿ ಹೊರಟು ಅವರೊಂದಿಗೆ ಹೋರಾಡಿ. ಅವರು ಹಜ್ಜೀಜ್ ಕಣಿವೆಯಿಂದ ಬರುವರು. ನೀವು ಅವರನ್ನು ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾಳೆ ಬೆಳಿಗ್ಗೆ ನೀವು ಅವರ ವಿರೋಧವಾಗಿ ಹೋಗಿರಿ. ಅವರು ಚೀಚ್ ಎಂಬ ಕಣಿವೆಯಿಂದ ಬರುತ್ತಾರೆ. ಯೆರೂಯೇಲ್ ಮರುಭೂಮಿಯ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:16
3 ತಿಳಿವುಗಳ ಹೋಲಿಕೆ  

ಅವನು , “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ.


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು