Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿದನು. ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೆಹೋವನ ಮುಂದೆ ಅಡ್ಡ ಬಿದ್ದು ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋಷಾಫಾಟನು ನೆಲದ ಮೇಲೆ ಸಾಷ್ಟಾಂಗನಮಸ್ಕಾರ ಮಾಡಿದನು. ಹಾಗೆಯೇ, ನೆರೆದಿದ್ದ ಜನರೆಲ್ಲರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಯೆಹೋಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು. ಯೆಹೂದದವರೆಲ್ಲರೂ, ಯೆರೂಸಲೇಮಿನ ನಿವಾಸಿಗಳೆಲ್ಲರೂ ಯೆಹೋವ ದೇವರ ಮುಂದೆ ಅಡ್ಡಬಿದ್ದು ಯೆಹೋವ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:18
8 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.


ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:


ಇದನ್ನು ಕೇಳಿದ ಆ ಮನುಷ್ಯ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದನು.


ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II


ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ ಕೋರಹಿಯರೂ ಎದ್ದು, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಮಹಾಸ್ವರದಿಂದ ಕೀರ್ತಿಸಿದರು.


ದಹನಬಲಿ ಸಮರ್ಪಣೆ ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.


ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು