2 ಪೂರ್ವಕಾಲ ವೃತ್ತಾಂತ 20:2 - ಕನ್ನಡ ಸತ್ಯವೇದವು C.L. Bible (BSI)2 ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸೈನ್ಯ ಸಮೂಹವೊಂದು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಆರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿ ಇರುತ್ತಾರೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೂತರು ಬಂದು ಯೆಹೋಷಾಫಾಟನಿಗೆ - ಮಹಾಸಮೂಹವು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿರುತ್ತಾರೆಂದು ತಿಳಿಸಿದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಕೆಲವು ಜನರು ಯೆಹೋಷಾಫಾಟನ ಬಳಿಗೆ ಬಂದು, “ಎದೋಮ್ಯರ ದೊಡ್ಡ ಸೈನ್ಯವು ಲವಣಸಮುದ್ರದ ಆಚೆಕಡೆಯಿಂದ ನಿನಗೆ ವಿರುದ್ಧವಾಗಿ ಬರುತ್ತಿದೆ. ಈಗಾಗಲೇ ಅವರು ಹಚೆಚೋನ್ ತಾಮಾರಿನಲ್ಲಿದ್ದಾರೆ” (ಇದನ್ನು ಏಂಗೆದಿ ಎಂತಲೂ ಕರೆಯುತ್ತಾರೆ.) ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಕೆಲವರು ಬಂದು ಯೆಹೋಷಾಫಾಟನಿಗೆ, “ಅರಾಮಿನ ಈಚೆಯಲ್ಲಿರುವ ಲವಣ ಸಮುದ್ರದ ಆಚೆಯಿಂದ ನಿನಗೆ ವಿರೋಧವಾಗಿ ಮಹಾ ಸಮೂಹವೊಂದು ಬರುತ್ತದೆ. ಅವರು ಏನ್ಗೆದಿ ಎಂಬ ಹಜಜೋನ್ ತಾಮಾರಿನಲ್ಲಿ ಇದ್ದಾರೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿ |