Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:20 - ಕನ್ನಡ ಸತ್ಯವೇದವು C.L. Bible (BSI)

20 ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:20
19 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.


ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;


ತೆಕೋವ ಪಟ್ಟಣವನ್ನು ಸ್ಥಾಪಿಸಿದ ಅಷ್ಹೂರನಿಗೆ ಹೆಲಾಹ, ನಾರಾ ಎಂಬ ಪತ್ನಿಯರು ಇದ್ದರು.


ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ ಕೋರಹಿಯರೂ ಎದ್ದು, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಮಹಾಸ್ವರದಿಂದ ಕೀರ್ತಿಸಿದರು.


ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.


ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.


ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು