2 ಪೂರ್ವಕಾಲ ವೃತ್ತಾಂತ 20:22 - ಕನ್ನಡ ಸತ್ಯವೇದವು C.L. Bible (BSI)22 ಅವರು ಉತ್ಸಾಹಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಸರ್ವೇಶ್ವರ ಯೆಹೂದ್ಯರಿಗೆ ವಿರುದ್ಧ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್‍ಪರ್ವತದವರನ್ನೂ ನಶಿಸುವುದಕ್ಕಾಗಿ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರು. ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್‍ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವದಕ್ಕೆ ಪ್ರಾರಂಭಿಸಲು ಯೆಹೋವನು ಯೆಹೂದ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್ ಪರ್ವತದವರನ್ನೂ ನಶಿಸುವದಕ್ಕೋಸ್ಕರ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರಿಂದ ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವರು ಹೀಗೆ ಸ್ತೋತ್ರ ಮಾಡುತ್ತಿರುವಾಗ ಅಮ್ಮೋನಿಯರ ಮೇಲೆಯೂ ಮೋವಾಬ್ಯರ ಮೇಲೆಯೂ ಸೇಯೀರ್ ಬೆಟ್ಟಪ್ರದೇಶದವರ ಮೇಲೆಯೂ ಇತರ ವೈರಿಗಳು ಹಠಾತ್ತನೆ ದಾಳಿ ಮಾಡುವಂತೆ ಯೆಹೋವನು ಮಾಡಿದನು. ಯೆಹೂದವನ್ನು ಆಕ್ರಮಣಮಾಡಲು ಬಂದಿದ್ದ ಅವರೆಲ್ಲರೂ ಸೋತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು. ಅಧ್ಯಾಯವನ್ನು ನೋಡಿ |
ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.