Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:23 - ಕನ್ನಡ ಸತ್ಯವೇದವು C.L. Bible (BSI)

23 ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್ ಬೆಟ್ಟಪ್ರದೇಶದವರೊಂದಿಗೆ ಹೋರಾಡಲಾರಂಭಿಸಿ ಅವರನ್ನು ಕೊಂದು ನಾಶಪಡಿಸಿದರು. ಅವರು ಸೇಯೀರ್ ಬೆಟ್ಟಪ್ರದೇಶದವರನ್ನು ಕೊಂದ ಬಳಿಕ ತಮ್ಮಲ್ಲಿ ತಾವೇ ಒಬ್ಬರನ್ನೊಬ್ಬರು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:23
12 ತಿಳಿವುಗಳ ಹೋಲಿಕೆ  

ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು; ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದನು.


ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.


ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.


ನಾನು ಸೇಯೀರ್ ಮಲೆನಾಡನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿದ್ದೇನೆ. ಆದುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.


ಇದಲ್ಲದೆ ಎದೋಮ್ ಗುಡ್ಡ ಪ್ರಾಂತ್ಯದಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ, ಮರಳುಗಾಡಿಗೆ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು.


ಯೆಹೂದ್ಯರು ಮರುಭೂಮಿಯ ಬುರುಜಿಗೆ ಬಂದು ಆ ಸೈನ್ಯಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.


ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ,’ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.


ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು