Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:25 - ಕನ್ನಡ ಸತ್ಯವೇದವು C.L. Bible (BSI)

25 ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವುದಕ್ಕಾಗಿ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧ, ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟನ್ನೂ ಸುಲಿದುಕೊಂಡರು. ಕೊಳ್ಳೆಯ ಮೊತ್ತ ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವದಕ್ಕೋಸ್ಕರ ಅಲ್ಲಿಗೆ ಹೋಗಲು ಅವರಿಗೆ ದ್ರವ್ಯ ವಸ್ತ್ರ ಶ್ರೇಷ್ಠಾಯುಧ ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲುಕೊಂಡರು. ಕೊಳ್ಳೆಯು ಬಲುಹೆಚ್ಚಾಗಿದ್ದದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋಷಾಫಾಟನೂ ಅವನ ಸೈನಿಕರೂ ಬಂದು ಸತ್ತವರ ದೇಹದಿಂದ ಬೆಲೆಬಾಳುವ ವಸ್ತುಗಳನ್ನು ಸೂರೆ ಮಾಡಿದರು. ಅವರು ಅನೇಕ ಪಶುಗಳನ್ನು, ಐಶ್ವರ್ಯವನ್ನು, ಬಟ್ಟೆಬರೆಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡರು. ಯೆಹೋಷಾಫಾಟನು ಮತ್ತು ಅವನ ಜನರು ಹೊತ್ತುಕೊಂಡು ಹೋಗಲಾರದಷ್ಟು ವಸ್ತುಗಳಿದ್ದವು; ಅವುಗಳನ್ನು ಶೇಖರಿಸಲು ಮೂರು ದಿವಸಗಳು ಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:25
15 ತಿಳಿವುಗಳ ಹೋಲಿಕೆ  

“ನೀವು ಮಹಿಳೆಯರನ್ನೆಲ್ಲ ಉಳಿಸಿದ್ದೇಕೆ?


ಮಾಣಿಕ್ಯಕ್ಕಿಂತ ಜ್ಞಾನದ ಬೆಲೆ ಅಮೂಲ್ಯ. ನಿನಗಿಷ್ಟವಾದುದಾವುದೂ ಅದಕ್ಕೆ ಸಾಟಿಯಿಲ್ಲ.


ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II


ನಿಮ್ಮ ಪ್ರತಿಯೊಬ್ಬ ಮಹಿಳೆ ನೆರೆಹೊರೆಯ ಮಹಿಳೆಯರಿಂದಲೂ ನಿಮ್ಮ ಮನೆಯಲ್ಲೇ ತಂಗಿರುವ ಮಹಿಳೆಯರಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಬರೆಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಮಕ್ಕಳುಮರಿಗಳಿಗೆ ತೊಡಿಸಿರಿ. ಹೀಗೆ ಈಜಿಪ್ಟರನ್ನು ಸೂರೆಮಾಡಿ ಹೊರಡುವಿರಿ.


ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ಯೆಹೂದ್ಯರು ಮರುಭೂಮಿಯ ಬುರುಜಿಗೆ ಬಂದು ಆ ಸೈನ್ಯಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.


ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.


ಪ್ರತಿಯೊಬ್ಬ ಸೈನಿಕನೂ ಸ್ವಂತಕ್ಕಾಗಿ ಲೂಟಿಯನ್ನು ಇಟ್ಟುಕೊಂಡಿದ್ದನು.


ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ಸಾಮಾನು ಸರಂಜಾಮುಗಳನ್ನೂ ಇಸ್ರಯೇಲರು ಕೊಳ್ಳೆಹೊಡೆದರು. ಜನರನ್ನಾದರೋ ಒಬ್ಬರನ್ನೂ ಬಿಡದೆ ಕತ್ತಿಯಿಂದ ನಿರ್ಮೂಲಮಾಡಿದರು.


ಜುದೇಯವು ಜೆರುಸಲೇಮಿನ ಪರವಾಗಿ ಯುದ್ಧಮಾಡುವುದು. ಸುತ್ತಮುತ್ತಲಿನ ರಾಷ್ಟ್ರಗಳ ಆಸ್ತಿಯನ್ನೆಲ್ಲಾ - ಬೆಳ್ಳಿಬಂಗಾರ, ಬಟ್ಟೆಬರೆಗಳನ್ನೆಲ್ಲಾ - ರಾಶಿರಾಶಿಯಾಗಿ ದೋಚಿಕೊಳ್ಳಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು