Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:27 - ಕನ್ನಡ ಸತ್ಯವೇದವು C.L. Bible (BSI)

27 ಆಮೇಲೆ ಯೆಹೂದ್ಯರು, ಜೆರುಸಲೇಮಿನವರು, ಅವರ ಮುಂಗಡೆಯಲ್ಲಿ ಯೆಹೋಷಾಫಾಟನು, ಸರ್ವೇಶ್ವರ ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾರೆಂದು ಜಯಘೋಷ ಮಾಡುತ್ತಾ ಜೆರುಸಲೇಮಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಮೇಲೆ ಯೆಹೂದ್ಯರೂ ಯೆರೂಸಲೇವಿುನವರೂ ಅವರ ಮುಂಗಡೆಯಲ್ಲಿ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇವಿುಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ತರುವಾಯ ಯೆಹೋಷಾಫಾಟನು ತನ್ನ ಸೈನ್ಯವನ್ನು ಜೆರುಸಲೇಮಿಗೆ ನಡಿಸಿದನು. ಶತ್ರುಗಳ ಮೇಲೆ ಯೆಹೋವನು ನೀಡಿದ ಜಯಕ್ಕಾಗಿ ಅವರು ಹರ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ಅವರ ಶತ್ರುಗಳ ಮೇಲೆ ಅವರು ಸಂತೋಷಪಡುವಂತೆ ಮಾಡಿದ್ದರಿಂದ, ಅವರು ಹರ್ಷಗೊಂಡು ಯೆರೂಸಲೇಮಿಗೆ ತಿರುಗಿ ಹೋಗುವುದಕ್ಕೆ ಯೆಹೂದ ಮತ್ತು ಯೆರೂಸಲೇಮಿನವರ ಮುಂಭಾಗದಲ್ಲಿ ಯೆಹೋಷಾಫಾಟನೂ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:27
13 ತಿಳಿವುಗಳ ಹೋಲಿಕೆ  

ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.


“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”


ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ನಿನಗೆನ್ನ ವಂದನೆ ಪ್ರಭು, ನನ್ನನುದ್ಧರಿಸಿದೆ I ಶತ್ರುಗಳೆನ್ನ ಕುರಿತು ಹಿಗ್ಗದಂತೆ ಮಾಡಿದೆ II


ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II


ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.


ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.


ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಜೆರುಸಲೇಮಿನಲ್ಲಿರುವ ಸರ್ವೇಶ್ವರನಾಲಯಕ್ಕೆ ಬಂದರು.


ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು