Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:29 - ಕನ್ನಡ ಸತ್ಯವೇದವು C.L. Bible (BSI)

29 ಸರ್ವೇಶ್ವರಾ ಸ್ವಾಮಿಯೇ ಇಸ್ರಯೇಲರ ಪರವಾಗಿ ಶತ್ರಗಳೊಡನೆ ಯುದ್ಧಮಾಡಿದರೆಂಬ ಸುದ್ದಿ ಅನ್ಯದೇಶಗಳ ರಾಜ್ಯಗಳವರೆಗೆ ಮುಟ್ಟಿದಾಗ, ಅವರೆಲ್ಲರು ಬಹಳ ಭಯಭೀತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೆಹೋವನು ತಾನೇ ಇಸ್ರಾಯೇಲ್ಯರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೆಹೋವನು ಇಸ್ರೇಲರ ವೈರಿಗಳಿಗೆ ವಿರುದ್ಧವಾಗಿ ಯುದ್ಧ ಮಾಡಿದನೆಂದು ಕೇಳಿ ಎಲ್ಲಾ ದೇಶಗಳವರು ಆತನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:29
14 ತಿಳಿವುಗಳ ಹೋಲಿಕೆ  

ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.


ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,


ಇದಲ್ಲದೆ ಸರ್ವೇಶ್ವರನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲೂ ದೊಡ್ಡ ಕೊಳ್ಳೆ ಸಿಕ್ಕಿತು.


ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.


ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.


ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಸರ್ವೇಶ್ವರ ಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು.


ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಜೆರುಸಲೇಮಿನಲ್ಲಿರುವ ಸರ್ವೇಶ್ವರನಾಲಯಕ್ಕೆ ಬಂದರು.


ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II


ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.


ಅವರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು. ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಸರ್ವೇಶ್ವರನ ಮತ್ತು ಅವರ ಸೈನ್ಯದ ಮುಂದೆ ಸುಡಾನರು ಭಿನ್ನಭಿನ್ನರಾದರು. ಇಸ್ರಯೇಲರಿಗೆ ಅಪರಿಮಿತವಾದ ಕೊಳ್ಳೆಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು