Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:34 - ಕನ್ನಡ ಸತ್ಯವೇದವು C.L. Bible (BSI)

34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆ ಇಸ್ರಯೇಲ್ ರಾಜರ ಗ್ರಂಥದಲ್ಲಿ ಹನಾನೀಯನ ಮಗ ಯೇಹುವಿನ ವೃತ್ತಾಂತದಲ್ಲಿ ದಾಖಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೆಹೋಷಾಫಾಟನು ಆರಂಭದಿಂದ ಕೊನೆಯವರೆಗೂ ಮಾಡಿದ ಬೇರೆ ಕಾರ್ಯಗಳು, ಹನಾನೀಯನ ಮಗನಾದ ಯೇಹು ಬರೆದ ಇಸ್ರೇಲ್ ರಾಜರ ಗ್ರಂಥದಲ್ಲಿ ದಾಖಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋಷಾಫಾಟನ ಇತರ ಕ್ರಿಯೆಗಳು, ಆರಂಭದಿಂದ ಅಂತ್ಯದವರೆಗೆ, ಇಸ್ರಾಯೇಲರ ಅರಸುಗಳ ಗ್ರಂಥದಲ್ಲಿ, ಅಂದರೆ, ಹನಾನೀಯ ಮಗನಾದ ಯೇಹುವಿನ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:34
11 ತಿಳಿವುಗಳ ಹೋಲಿಕೆ  

ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.


ಆಗ ಸರ್ವೇಶ್ವರಸ್ವಾಮಿ ಹನಾನೀಯನ ಮಗ ಯೇಹುವಿನ ಮುಖಾಂತರ ಬಾಷನಿಗೆ ಹೀಗೆ ಹೇಳಿಸಿದರು:


ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.


ಆಸನ ಪೂರ್ವೋತ್ತರ ಚತರಿತ್ರೆಯನ್ನು ಯೆಹೂದ ಮತ್ತು ಇಸ್ರಯೇಲ್ ರಾಜರ ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ.


ಅಬೀಯನ ಉಳಿದ ಚರಿತ್ರೆ ಹಾಗೂ ನಡೆನುಡಿಗಳು ಪ್ರವಾದಿ ಇದ್ದೋವಿನ ವ್ಯಾಖ್ಯಾನದಲ್ಲಿ ಲಿಖಿತವಾಗಿವೆ.


ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ ಹಾಗೂ ದರ್ಶಿಯಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.


ಬಾಷನೂ ಅವನ ಮಗ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರಚೋದಿಸಿದರು. ತಮ್ಮ ವಿಗ್ರಹಗಳಿಂದ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದರು.


ಇವನ ಉಳಿದ ಚರಿತ್ರೆ ಹಾಗು ಇವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರ ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.


ಯಾರೊಬ್ಬಾಮನ ಇತರ ಕಾರ್ಯಕಲಾಪಗಳು, ಅವನ ಯುದ್ಧಗಳು ಹಾಗು ರಾಜ್ಯಭಾರಗಳ ವಿವರವು, ‘ಇಸ್ರಯೇಲ್ ರಾಜರ ಇತಿಹಾಸ’ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸ ಆಸನ ಬಳಿಗೆ ಬಂದು, “ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಳ್ಳದೆ ಸಿರಿಯಾದ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಸಿರಿಯಾ ರಾಜನ ಸೈನ್ಯವು ನಿಮ್ಮ ಕೈಗೆ ಬೀಳದಂತೆ ನುಣಿಚಿಕೊಂಡಿತು.


ಉಳಿದ ಅವನ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಯೇಲರ ರಾಜರ ಗ್ರಂಥದಲ್ಲಿ ಲಿಖಿತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು