Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:4 - ಕನ್ನಡ ಸತ್ಯವೇದವು C.L. Bible (BSI)

4 ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ಜನರೆಲ್ಲಾ ಯೆಹೋವನನ್ನು ವಿಚಾರಿಸಲು ಒಟ್ಟಾಗಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:4
13 ತಿಳಿವುಗಳ ಹೋಲಿಕೆ  

ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು I ಕಟ್ಟಿಸುವನು ಯೆಹೂದ ನಾಡಿನ ನಗರಗಳನು I ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು II


ಜುದೇಯ ನಾಡಿನ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.


ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದುಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,


ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.


ನಾಚಿಕೆ ಇಲ್ಲದ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ,


ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.


ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II


ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು