Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:5 - ಕನ್ನಡ ಸತ್ಯವೇದವು C.L. Bible (BSI)

5 ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದುಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೂದ್ಯರೂ ಯೆರೂಸಲೇವಿುನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ ಯೆಹೋಷಾಫಾಟನು ಅದರ ಮುಂಗಡೆಯಲ್ಲಿ ನಿಂತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋಷಾಫಾಟನು ದೇವಾಲಯದ ಹೊಸ ಅಂಗಳದಲ್ಲಿ ಕೂಡಿಬಂದ ಜನರೆದುರು ಎದ್ದುನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೋಷಾಫಾಟನು ಹೊಸ ಅಂಗಳದ ಮುಂದೆ ಯೆಹೋವ ದೇವರ ಮಂದಿರದಲ್ಲಿರುವ ಯೆಹೂದದ ಯೆರೂಸಲೇಮಿನ ಜನಸಮೂಹದ ಮಧ್ಯದಲ್ಲಿ ನಿಂತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:5
7 ತಿಳಿವುಗಳ ಹೋಲಿಕೆ  

ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.


ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.


“ಸರ್ವೇಶ್ವರಾ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿ ಇರುವವರು ನೀವಲ್ಲವೇ? ನೀವು ಜನಾಂಗಗಳ ಎಲ್ಲ ರಾಜ್ಯಗಳನ್ನೂ ಆಳುತ್ತಿದ್ದೀರಿ. ನಿಮ್ಮ ಹಸ್ತದಲ್ಲಿ ಬಲಪರಾಕ್ರಮಗಳಿವೆ; ನಿಮ್ಮೆದುರಿನಲ್ಲಿ ಯಾರೂ ನಿಲ್ಲಲಾರರು.


ಯೆರೆಮೀಯನು ಸರ್ವೇಶ್ವರ ಸ್ವಾಮಿಯ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಬಳಿಕ ಅಲ್ಲಿಂದ ಬಂದು ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು:


“ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಸರ್ವೇಶ್ವರನಾದ ನಿಮ್ಮನ್ನು ಪ್ರಾರ್ಥಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು