2 ಪೂರ್ವಕಾಲ ವೃತ್ತಾಂತ 20:7 - ಕನ್ನಡ ಸತ್ಯವೇದವು C.L. Bible (BSI)7 ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಹೊರಡಿಸಿ ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟಿಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀನೇ ನಮ್ಮ ದೇವರಾಗಿರುವೆ. ನೀನು ಈ ದೇಶದಲ್ಲಿ ವಾಸವಾಗಿದ್ದ ಜನರನ್ನು ಹೊರಡಿಸಿ ಈ ದೇಶವನ್ನು ಅಬ್ರಹಾಮನ ಸಂತತಿಯವರಾದ ಇಸ್ರೇಲರಿಗೆ ಕೊಟ್ಟೆ. ಅಬ್ರಹಾಮನು ನಿನ್ನ ಸ್ನೇಹಿತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ? ಅಧ್ಯಾಯವನ್ನು ನೋಡಿ |