Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 20:8 - ಕನ್ನಡ ಸತ್ಯವೇದವು C.L. Bible (BSI)

8 ಅವರು ಈ ನಾಡಿನಲ್ಲಿ ನೆಲೆಗೊಂಡು ಇದರಲ್ಲಿ ನಿಮ್ಮ ಹೆಸರಿಗಾಗಿ ಒಂದು ಪವಿತ್ರಾಲಯವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರು ಈ ದೇಶದಲ್ಲಿ ಇಳುಕೊಂಡು ಇದರಲ್ಲಿ ನಿನ್ನ ಹೆಸರಿಗೋಸ್ಕರ ಪವಿತ್ರಾಲಯವನ್ನು ಕಟ್ಟಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅಬ್ರಹಾಮನ ಸಂತತಿಯವರು ಈ ದೇಶದಲ್ಲಿ ವಾಸವಾಗಿ ನಿನ್ನ ಹೆಸರನ್ನು ಸ್ಥಾಪಿಸಲು ನಿನಗೊಂದು ದೇವಾಲಯವನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ಅದರಲ್ಲಿ ನಿವಾಸಮಾಡಿ, ಅದರಲ್ಲಿ ನಿಮ್ಮ ಹೆಸರಿಗೆ ಪರಿಶುದ್ಧವಾದ ಸ್ಥಳವನ್ನು ಕಟ್ಟಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 20:8
7 ತಿಳಿವುಗಳ ಹೋಲಿಕೆ  

ತಾವು ಕೊಟ್ಟ ಮಾತನ್ನು ಸರ್ವೇಶ್ವರ ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದನ ಸ್ಥಾನದಲ್ಲಿ ಕುಳಿತುಕೊಂಡಿದ್ದೇನೆ. ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆ.


ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.


ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?


ತಮ್ಮ ಮೇಲೆ ಖಡ್ಗವಿಧಿ, ಘೋರವ್ಯಾಧಿ, ಕ್ಷಾಮಡಾಮರ, ಮೊದಲಾದ ಆಪತ್ತುಗಳು ಬರುವಾಗ, ನಿಮ್ಮ ನಾಮಮಹಿಮೆ ಇರುವ ಈ ಆಲಯದ ಮುಂದೆಯೂ ನಿಮ್ಮ ಮುಂದೆಯೂ ನಿಂತು, ತಮ್ಮ ಇಕ್ಕಟ್ಟಿನಲ್ಲಿ ನಿಮಗೆ ಮೊರೆ ಇಡುವುದಾದರೆ ನೀವು ಆಲಿಸಿ ರಕ್ಷಿಸುವಿರಿ ಎಂದುಕೊಂಡರಷ್ಟೆ.


ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.


ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು