Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:12 - ಕನ್ನಡ ಸತ್ಯವೇದವು C.L. Bible (BSI)

12 ಹೀಗಿರಲು, ಪ್ರವಾದಿ ಎಲೀಯನು ಪತ್ರದ ಮೂಲಕ ಅವನಿಗೆ, “ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರನ ಮಾತನ್ನು ಕೇಳು: ನೀನು ನಿನ್ನ ತಂದೆ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸ ಆಸನ ಮಾರ್ಗದಲ್ಲಿ ನಡೆಯಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ, ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ, “ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು; ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿ ನಡೆಯಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲು ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ - ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು. ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿಯೂ ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿಯೂ ನಡೆಯಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪ್ರವಾದಿಯಾದ ಎಲೀಯನು ಯೆಹೋರಾಮನಿಗೆ ಈ ಸಂದೇಶವನ್ನು ಕಳುಹಿಸಿದನು: “ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನ ಮಾತಿದು. ಆತನು ಹೇಳುವುದೇನೆಂದರೆ, ‘ಯೆಹೋರಾಮನೇ, ನೀನು ನಿನ್ನ ತಂದೆಯಾದ ಯೆಹೋಷಾಫಾಟನು ಜೀವಿಸಿದ್ದ ರೀತಿಯಲ್ಲಿ ಜೀವಿಸುತ್ತಿಲ್ಲ. ಯೆಹೂದದೇಶದ ಅರಸನಾದ ಆಸನು ಜೀವಿಸಿದ್ದ ರೀತಿಯಲ್ಲಿಯೂ ನೀನು ಜೀವಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:12
14 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಕೈಬೆರಳುಗಳು ಕಾಣಿಸಿಕೊಂಡು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು. ಬರೆಯುತ್ತಿದ್ದ ಆ ಕೈಯನ್ನು ರಾಜನು ನೋಡಿದನು.


ಯೆಹೂದಿ ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರುಳಿ ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.


“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು.


ಇವನು ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ಅಬೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು. ಇವನ ಕಾಲದಲ್ಲಿ, ನಾಡಿನಲ್ಲಿ ಹತ್ತು ವರ್ಷ ಶಾಂತಿಸಮಾಧಾನವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು