Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:13 - ಕನ್ನಡ ಸತ್ಯವೇದವು C.L. Bible (BSI)

13 ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಜೆರುಸಲೇಮಿನವರನ್ನೂ ಪ್ರೇರೇಪಿಸಿದೆ; ಮತ್ತು ನಿನ್ನ ತಂದೆಯ ಕುಟುಂಬದವರೂ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇಸ್ರಾಯೇಲ್ ರಾಜರ ಮಾರ್ಗದಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇಮಿನವರನ್ನೂ ಪ್ರೇರೇಪಿಸಿರುವೆ; ಮತ್ತು ನಿನ್ನ ತಂದೆಯ ಕುಂಟುಂಬದವರೂ ನಿನಗಿಂತ ಉತ್ತಮರೂ, ನಿನ್ನ ಸಹೋದರರನ್ನೂ ಕೊಂದು ಹಾಕಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹಮಾಡುವಂತೆ ಯೆಹೂದ್ಯರನ್ನೂ ಯೆರೂಸಲೇವಿುನವರನ್ನೂ ಪ್ರೇರಿಸಿದಿ; ಮತ್ತು ನಿನ್ನ ತಂದೆಯ ಕುಟುಂಬಕ್ಕೆ ಸೇರಿ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇಸ್ರೇಲರ ರಾಜರುಗಳು ಜೀವಿಸಿದ್ದ ರೀತಿಯಲ್ಲಿ ನೀನು ಜೀವಿಸುತ್ತಿರುವೆ. ಯೆಹೂದ ದೇಶದಲ್ಲಿಯೂ ಜೆರುಸಲೇಮಿನಲ್ಲಿಯೂ ವಾಸಿಸುವ ಜನರು ನನ್ನ ಚಿತ್ತಕ್ಕನುಸಾರವಾಗಿ ಜೀವಿಸದಂತೆ ನೀನು ಮಾಡುತ್ತಿರುವೆ. ಅಹಾಬನೂ ಅವನ ಕುಟುಂಬದವರೂ ಹೀಗೆಯೇ ಮಾಡಿದರು. ಅವರು ದೇವರಿಗೆ ಅಪನಂಬಿಗಸ್ತರಾಗಿದ್ದರು. ನೀನು ನಿನ್ನ ತಮ್ಮಂದಿರನ್ನು ಕೊಂದುಹಾಕಿದೆ. ಅವರು ನಿನಗಿಂತಲೂ ಉತ್ತಮರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು, ಅಹಾಬನ ಮನೆಯವರು ದೇವದ್ರೋಹ ಮಾಡಿದಂತೆ, ಯೆಹೂದದವರನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ ದ್ರೋಹ ಮಾಡಲು ಪ್ರೇರೇಪಿಸಿ, ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆಯವರಾದ ನಿನ್ನ ಸಹೋದರರನ್ನು ಕೊಂದುಹಾಕಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:13
18 ತಿಳಿವುಗಳ ಹೋಲಿಕೆ  

ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು, ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲ ಸಹೋದರರನ್ನೂ ಕೆಲವು ಮಂದಿ ಇಸ್ರಯೇಲ್ ಪ್ರಮುಖರನ್ನೂ ಕತ್ತಿಯಿಂದ ಸಂಹರಿಸಿದನು.


ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ಅಹಾಬನ ಮಗಳನ್ನು ಇವನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.


ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?


ನರಹತ್ಯೆಯಿಂದ ನಗರಗಳನ್ನು ನಿರ್ಮಿಸುವವನಿಗೆ ಧಿಕ್ಕಾರ! ಅನ್ಯಾಯವಾದ ಅಸ್ತಿವಾರದ ಮೇಲೆ ಊರನ್ನು ಕಟ್ಟುವವನಿಗೆ ಧಿಕ್ಕಾರ!


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.


ಇವನು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ ಹಾಗು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನು ಆಗಿದ್ದನು.


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.


ಆದುದರಿಂದ ಸರ್ವೇಶ್ವರ ನಿನ್ನ ಪ್ರಜೆಯನ್ನೂ ಮಡದಿಮಕ್ಕಳನ್ನೂ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವರು.


ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸ ತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು