Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:14 - ಕನ್ನಡ ಸತ್ಯವೇದವು C.L. Bible (BSI)

14 ಆದುದರಿಂದ ಸರ್ವೇಶ್ವರ ನಿನ್ನ ಪ್ರಜೆಯನ್ನೂ ಮಡದಿಮಕ್ಕಳನ್ನೂ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದುದರಿಂದ ಯೆಹೋವನು ನಿನ್ನ ಪ್ರಜೆಗಳ, ಹೆಂಡತಿ ಮಕ್ಕಳನ್ನೂ, ಆಸ್ತಿಪಾಸ್ತಿ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆದದರಿಂದ ಯೆಹೋವನು ನಿನ್ನ ಪ್ರಜೆಯನ್ನೂ ಹೆಂಡರುಮಕ್ಕಳನ್ನೂ ಸರ್ವಸ್ವವನ್ನೂ ಮಹಾಪತ್ತಿಗೆ ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಯೆಹೋವನು ನಿನ್ನ ಜನರನ್ನು ಭಯಂಕರವಾದ ರೋಗದಿಂದ ದಂಡಿಸುವನು. ಆತನು ನಿನ್ನನ್ನೂ ನಿನ್ನ ಹೆಂಡತಿಮಕ್ಕಳನ್ನೂ ಆಸ್ತಿಪಾಸ್ತಿಯನ್ನೂ ಶಿಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ, ನಿನ್ನ ಮಕ್ಕಳನ್ನೂ, ನಿನ್ನ ಹೆಂಡತಿಯರನ್ನೂ, ನಿನ್ನ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:14
7 ತಿಳಿವುಗಳ ಹೋಲಿಕೆ  

“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಜೆರುಸಲೇಮಿನವರನ್ನೂ ಪ್ರೇರೇಪಿಸಿದೆ; ಮತ್ತು ನಿನ್ನ ತಂದೆಯ ಕುಟುಂಬದವರೂ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದೆ;


ನಿನಗಾದರೋ ಕರುಳುಬೇನೆಯ ಕಠಿಣರೋಗ ಬರುವುದು. ಅದು ಬಹುದಿನಗಳವರೆಗೂ ವಾಸಿ ಆಗದು; ಕಡೆಯಲ್ಲಿ ನಿನ್ನ ಕರುಳುಗಳು ಹೊರಗೆ ಬೀಳುವುವು,” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು