Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:16 - ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಫಿಲಿಷ್ಟಿಯರನ್ನೂ ಸುಡಾನಿನ ನೆರೆಯವರಾದ ಅರೇಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಫಿಲಿಷ್ಟಿಯರನ್ನೂ, ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಫಿಲಿಷ್ಟಿಯರನ್ನೂ ಕೂಷ್ಯರ ನೆರೆಯವರಾದ ಅರಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಎಬ್ಬಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಫಿಲಿಷ್ಟಿಯರೂ ಇಥಿಯೋಪಿಯದವರ ಬಳಿಯಲ್ಲಿ ವಾಸವಾಗಿದ್ದ ಅರಬಿಯರೂ ಯೆಹೋರಾಮನ ಮೇಲೆ ಕೋಪಗೊಳ್ಳುವಂತೆ ಯೆಹೋವನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:16
16 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರೇಬಿಯರು ತಮ್ಮ ಪಶುಪ್ರಾಣಿಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳನ್ನೂ ಏಳು ಸಾವಿರದ ಏಳುನೂರು ಹೋತಗಳನ್ನೂ ಕೊಡುತ್ತಿದ್ದರು.


ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.


ಜೆರುಸಲೇಮಿನವರು ಯೆಹೋರಾಮನಿಗೆ ಬದಲಾಗಿ ಅವನ ಕಿರಿಯಮಗ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರೇಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಜುದೇಯದ ಅರಸ ಯೆಹೋರಾಮನ ಮಗ ಅಹಜ್ಯನು ಅರಸನಾದನು.


ಸೊಲೊಮೋನನಿಗೆ ವಿರುದ್ಧ ದೇವರು ಎಬ್ಬಿಸಿದ ಎರಡನೆಯ ವೈರಿ ಎಲ್ಯಾದಾವನ ಮಗ ರೆಜೋನ್ ಎಂಬವನು.


ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧ ದಂಗೆಯೇಳುವಂತೆ ಮಾಡಿದರು ಸರ್ವೇಶ್ವರ.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.


ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:


ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.


ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.


ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.


ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!


ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.


ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು