2 ಪೂರ್ವಕಾಲ ವೃತ್ತಾಂತ 21:17 - ಕನ್ನಡ ಸತ್ಯವೇದವು C.L. Bible (BSI)17 ಅವರು ಜುದೇಯದ ಮೇಲೆ ಯುದ್ಧಕ್ಕೆ ಬಂದು, ನಾಡಿನೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲ ಸೊತ್ತನ್ನೂ ಅರಸನ ಮಡದಿ ಮಕ್ಕಳನ್ನೂ ಸೆರೆಗೆ ಒಯ್ದರು. ಅವನಿಗೆ ಕಿರಿಯಮಗ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು, ದೇಶದೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲಾ ವಸ್ತುಗಳನ್ನೂ, ಅರಸನ ಹೆಂಡತಿಯರನ್ನೂ ಮತ್ತು ಮಕ್ಕಳನ್ನೂ ಸೆರೆಯಾಗಿ ಒಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು, ಯಾವ ಮಕ್ಕಳೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ಯೆಹೂದದ ಮೇಲೆ ಯುದ್ಧಕ್ಕೆ ಬಂದು ದೇಶದೊಳಗೆ ನುಗ್ಗಿ ಅರಮನೆಯಲ್ಲಿ ಸಿಕ್ಕಿದ ಎಲ್ಲಾ ಸೊತ್ತನ್ನೂ ಅರಸನ ಹೆಂಡರುಮಕ್ಕಳನ್ನೂ ಸೆರೆಯೊಯ್ದರು. ಅವನಿಗೆ ಕಿರಿಯ ಮಗನಾದ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರು ಬಂದು ಯೆಹೂದದೇಶದ ಮೇಲೆ ಆಕ್ರಮಣ ಮಾಡಿದರು; ರಾಜನಿವಾಸದಲ್ಲಿದ್ದ ನಿಕ್ಷೇಪವನ್ನೆಲ್ಲಾ ಸೂರೆಮಾಡಿದರು. ಅಲ್ಲದೆ ಯೆಹೋರಾಮನ ಪತ್ನಿ, ಮಕ್ಕಳನ್ನೂ ಕೊಂಡೊಯ್ದರು. ಯೆಹೋರಾಮನ ಕೊನೆಯ ಮಗನು ಮಾತ್ರ ಉಳಿದನು. ಅವನ ಹೆಸರು ಯೆಹೋವಾಹಾಜ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿ |