Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 21:19 - ಕನ್ನಡ ಸತ್ಯವೇದವು C.L. Bible (BSI)

19 ಕಾಲಾಂತರದಲ್ಲಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಅದೇ ರೋಗದ ನಿಮಿತ್ತ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪೂರ್ವಿಕರಿಗೆ ಧೂಪಹಾಕಿದಂತೆ ಅವನ ಪ್ರಜೆಗಳು ಅವನಿಗೆ ಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕಾಲಾಂತರದಲ್ಲಿ ಅಂದರೆ ಸುಮಾರು ಎರಡು ವರುಷಗಳಾದ ಮೇಲೆ ಆ ರೋಗದಿಂದ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗೋಸ್ಕರ ಧೂಪಹಾಕಿದ ಪ್ರಕಾರ ಅವನಿಗೆ ಹಾಕಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಎರಡು ವರ್ಷಗಳ ನಂತರ ಆ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಬಹಳ ನೋವನ್ನು ಅನುಭವಿಸಿ ಸತ್ತನು. ಅವನು ಸತ್ತಾಗ ಅವನ ತಂದೆಗೆ ಧೂಪಹಾಕಿ ಗೌರವಿಸಿದಂತೆ ಯೆಹೋರಾಮನಿಗೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಎರಡು ವರ್ಷವಾದ ತರುವಾಯ, ಅವನ ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆ ಅವನು ಕಡುಬೇನೆಯಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೆ ಗೌರವಕ್ಕೋಸ್ಕರ ಅಗ್ನಿಕುಂಡ ಹಚ್ಚಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 21:19
4 ತಿಳಿವುಗಳ ಹೋಲಿಕೆ  

ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು.


ನೆಮ್ಮದಿಯಿಂದ ಸಾಯುವೆ. ನಿನಗಿಂತ ಮುಂಚೆ, ನಿನ್ನ ಪೂರ್ವಜರಾದ ದಿವಂಗತ ಅರಸರ ಸ್ಮರಣಾರ್ಥ ಜನರು ಧೂಪಹಾಕಿದ ಪ್ರಕಾರ ನಿನಗೂ ಹಾಕುವರು. ‘ಅಯ್ಯೋ ಒಡೆಯಾ’ ಎಂದು ನಿನಗಾಗಿ ಗೋಳಾಡುವರು. ಇದು ನನ್ನ ನುಡಿ,’ ಎಂದಿದ್ದಾರೆ ಸರ್ವೇಶ್ವರ.”


ನಿನಗಾದರೋ ಕರುಳುಬೇನೆಯ ಕಠಿಣರೋಗ ಬರುವುದು. ಅದು ಬಹುದಿನಗಳವರೆಗೂ ವಾಸಿ ಆಗದು; ಕಡೆಯಲ್ಲಿ ನಿನ್ನ ಕರುಳುಗಳು ಹೊರಗೆ ಬೀಳುವುವು,” ಎಂದು ತಿಳಿಸಿದನು.


ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು