2 ಪೂರ್ವಕಾಲ ವೃತ್ತಾಂತ 21:20 - ಕನ್ನಡ ಸತ್ಯವೇದವು C.L. Bible (BSI)20 ಅವನು ಪಟ್ಟಕ್ಕೆ ಬಂದಾಗ ಮೂವತ್ತ ಎರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟುವರ್ಷ ಆಳಿದನು. ಅವನು ತೀರಿಹೋದಾಗ ಯಾರೂ ಶೋಕಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎಂಟು ವರ್ಷ ರಾಜ್ಯಭಾರಮಾಡಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ. ಅವನು ಯಾರಿಗೂ ಇಷ್ಟವಿಲ್ಲದವನಾಗಿ ಗತಿಸಿಹೋದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜರ ಸಮಾಧಿಗಳಲ್ಲಿ ಅವನನ್ನು ಸಮಾಧಿಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರುಷದವನಾಗಿದ್ದನು; ಅವನು ಯೆರೂಸಲೇವಿುನಲ್ಲಿ ಎಂಟು ವರುಷ ಆಳಿದನು. ಅವನು ತೀರಿಹೋದಾಗ ಅವನನ್ನು ಯಾರೂ ಹಂಬಲಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಶ್ಮಶಾನದಲ್ಲಿ ಅಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋರಾಮನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಅವನು ಎಂಟು ವರ್ಷ ಕಾಲ ಜೆರುಸಲೇಮಿನಲ್ಲಿ ಆಳಿದನು. ಅವನು ಸತ್ತಾಗ ಅವನಿಗೋಸ್ಕರ ಯಾರೂ ದುಃಖಪಡಲಿಲ್ಲ. ಜನರು ಅವನನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಆದರೆ ರಾಜರ ಸಮಾಧಿ ಸ್ಥಳದಲ್ಲಿ ಅವನನ್ನು ಹೂಳಿಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ. ಅಧ್ಯಾಯವನ್ನು ನೋಡಿ |